ರಾಹುಲ್ ಗಾಂಧಿ ಆಮೇಲೆ, ಮೊದಲು ಇವರನ್ನು ಮೀಟ್ ಮಾಡಲಿರುವ ಸಿಎಂ, ಡಿಸಿಎಂ

Krishnaveni K

ಗುರುವಾರ, 10 ಜುಲೈ 2025 (11:50 IST)
ನವದೆಹಲಿ: ರಾಜ್ಯ ರಾಜಕಾರಣದ ಬಗ್ಗೆ ಚರ್ಚಿಸಲು ದೆಹಲಿಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ. ರಾಹುಲ್ ಗಾಂಧಿ ಭೇಟಿಗೆ ಮುನ್ನ ಈ ಇಬ್ಬರು ನಾಯಕರನ್ನು ಸಿಎಂ-ಡಿಸಿಎಂ ಜೋಡಿ ಭೇಟಿ ಮಾಡಲಿದ್ದಾರೆ.

ಡಿಕೆ ಶಿವಕುಮಾರ್ ಮೊನ್ನೆಯಿಂದಲೇ ದೆಹಲಿಯಲ್ಲಿದ್ದರೆ, ಸಿಎಂ ಸಿದ್ದರಾಮಯ್ಯ ನಿನ್ನೆ ಅವರನ್ನು ಕೂಡಿಕೊಂಡಿದ್ದರು. ರಾಜ್ಯದ ಯೋಜನೆಗಳಿಗೆ ಕೇಂದ್ರದ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಇಬ್ಬರೂ ನಾಯಕರು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿದ್ದರು.

ಇಂದು ಇಬ್ಬರೂ ನಾಯಕರು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ. ಅದಕ್ಕೆ ಮೊದಲು ರಾಜ್ಯ ನಾಯಕರುಗಳ ಅಭಿಪ್ರಾಯ ಸಂಗ್ರಹಿಸಿ ಮರಳಿರುವ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಲಿದ್ದಾರೆ.

ಬಳಿಕ ರಾಹುಲ್ ಗಾಂಧಿಯನ್ನು ಭೇಟಿ ಮಾಡಲಿದ್ದಾರೆ. ರಾಹುಲ್ ಜೊತೆ ಭೇಟಿ ವೇಳೆ ಸಿಎಂ ಕುರ್ಚಿ ಬಗ್ಗೆ ಚರ್ಚೆಯಾಗಬಹುದೇ ಎಂಬ ಕುತೂಹಲ ಎಲ್ಲರಲ್ಲಿದೆ. ಇದೀಗಷ್ಟೇ ವಿದೇಶ ಪ್ರವಾಸ ಮುಗಿಸಿ ಬಂದಿರುವ ರಾಹುಲ್ ಗಾಂಧಿ ಜೊತೆ ರಾಜ್ಯ ರಾಜಕಾರಣದ ಇತ್ತೀಚೆಗಿನ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ