ಬೆಂಗಳೂರು: ಇಂದು ರಾಜ್ಯಾದ್ಯಂತ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬ ಆಚರಿಸಲಾಗುತ್ತಿದೆ. ನಿನ್ನೆ ರಾತ್ರಿ ಚಂದ್ರ ದರ್ಶನವಾಗಿದ್ದು, ಇಂದು ರಂಜಾನ್ ಹಬ್ಬ ಆಚರಿಸಲಾಗುತ್ತಿದೆ.
ರಂಜಾನ್ ಹಬ್ಬಕ್ಕೆ ಸಿಎಂ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾ ಮೂಲಕ ಶುಭ ಕೋರಿದ್ದಾರೆ. ಶ್ರದ್ಧಾ ಭಕ್ತಿಯ ಪ್ರತೀಕವಾದ ರಂಜಾನ್ ಹಬ್ಬವು ನಾಡಿನಲ್ಲಿ ಸುಖ, ಶಾಂತಿ ಸೌಹಾರ್ದತೆಯು ನೆಲೆಗೊಳ್ಳಲು ಪ್ರೇರಣೆಯಾಗಲಿ ಎಂದುಹಾರೈಸುತ್ತೇನೆ. ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡಾ ಶುಭ ಕೋರಿದ್ದು, ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಪವಿತ್ರ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳು. ತ್ಯಾಗ, ಪ್ರೀತಿ, ಸೌಹಾರ್ದತೆಯ ಸಂಕೇತವಾದ ಈ ಹಬ್ಬವು ಎಲ್ಲರಿಗೂ ಸುಖ, ಶಾಂತಿ ಕರುಣಿಸಲಿ ಎಂದಿದ್ದಾರೆ.
ಇದಲ್ಲದೆ ಇಂದು ನಂದಿ ದುರ್ಗ ರಸ್ತೆಯ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರೊಂದಿಗೆ ರಂಜಾನ್ ಪ್ರಾರ್ಥನೆಯಲ್ಲಿ ಡಿಕೆ ಶಿವಕುಮಾರ್ ಭಾಗವಹಿಸಲಿದ್ದಾರೆ.