ದೆಹಲಿಗೆ ಹೋದರೂ ಸಿಎಂ ಸಿದ್ದರಾಮಯ್ಯಗೆ ಮುಡಾ ಟೆನ್ಷನ್

Krishnaveni K

ಗುರುವಾರ, 21 ನವೆಂಬರ್ 2024 (12:23 IST)
ನವದೆಹಲಿ: ದೆಹಲಿಗೆ ಹೋದರೂ ಸಿಎಂ ಸಿದ್ದರಾಮಯ್ಯಗೆ ಮುಡಾ ಟೆನ್ಷನ್ ಕಡಿಮೆಯಾಗಿಲ್ಲ. ವಿತ್ತ ಸಚಿವೆಯನ್ನು ಭೇಟಿಯಾಗುವ ಉದ್ದೇಶದಿಂದ ದೆಹಲಿಗೆ ತೆರಳಿರುವ ಸಿಎಂ ಮೊದಲು ಮುಡಾ ವಿಚಾರವಾಗಿ ವಕೀಲರ ಜೊತೆ ಚರ್ಚೆ ನಡೆಸಿದ್ದಾರೆ.

ಇತ್ತೀಚೆಗಷ್ಟೇ ನಬಾರ್ಡ್ ಸಾಲ ಕಡಿತ ಮಾಡಿ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪಿಸಿದ್ದ ಸಿದ್ದರಾಮಯ್ಯ ದೆಹಲಿಗೆ ತೆರಳಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ನಮ್ಮ ಪರಿಸ್ಥಿತಿ ವಿವರಿಸುವುದಾಗಿ ಹೇಳಿದ್ದರು. ಅದರಂತೆ ಇಂದು ಅವರು ದೆಹಲಿಗೆ ತೆರಳಿದ್ದಾರೆ.

ಆದರೆ ದೆಹಲಿಗೆ ತೆರಳಿದ ತಕ್ಷಣ ಸಿಎಂ ಮೊದಲು ತಮ್ಮ ವಕೀಲ ಅಭಿಷೇಕ್ ಮನು ಸಿಂಘ್ವಿಯವರನ್ನು ಭೇಟಿ ಮಾಡಿದ್ದಾರೆ. ಮುಡಾ ಹಗರಣದಲ್ಲಿ ಅಭಿಷೇಕ್ ಮನು ಸಿಂಘ್ವಿಯವರು ಸಿದ್ದರಾಮಯ್ಯ ಪರವಾಗಿ ವಾದ ಮಂಡನೆ ಮಾಡುತ್ತಿದ್ದಾರೆ. ಹೀಗಾಗಿ ಈಗ ಸಿದ್ದರಾಮಯ್ಯ ತಮ್ಮ ಕೇಸ್ ಬಗ್ಗೆ ಚರ್ಚೆ ನಡೆಸಿದ್ದಾರೆ.

ಈಗಾಗಲೇ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯನವರನ್ನು ಒಂದು ಸುತ್ತಿನ ವಿಚಾರಣೆ ನಡೆಸಿದ್ದಾರೆ. ಹೀಗಾಗಿ ಮುಂದಿನ ಕಾನೂನು ಹೋರಾಟಗಳ ಬಗ್ಗೆ ಸಿಎಂ ತಮ್ಮ ವಕೀಲರ ಜೊತೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ  ವೇಳೆ ಅವರು ಮಾಧ್ಯಮಗಳಿಗೆ ಯಾವುದೇ ಮಾತನಾಡಲು ನಿರಾಕರಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ