ಲಿಂಗಾಯತರ ಮಧ್ಯೆ ಬೆಂಕಿ ಹಚ್ಚಿದ್ದು ಸಿಎಂ ಸಿದ್ದರಾಮಯ್ಯ: ಈಶ್ವರಪ್ಪ
ಕಲಬುರ್ಗಿ: ವೀರಶೈವ ಲಿಂಗಾಯತ ಧರ್ಮದವರ ಮಧ್ಯೆ ಸಿಎಂ ಸಿದ್ದರಾಮಯ್ಯ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಆಡಳಿತ ನಡೆಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಅವರಲ್ಲಿಯೇ ಸಾಕಷ್ಟು ಗೊಂದಲಗಳಿವೆ. ಕಷ್ಟದಲ್ಲಿರುವ ರೈತರ ಸಹಾಯಕ್ಕಾಗಿ ಹೆಸರು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ರಾಜ್ಯ ಸರ್ಕಾರ ತಕ್ಷಣ ಖರೀದಿ ಕೇಂದ್ರ ಆರಂಭಿಸಲಿ ಎಂದು ಈಶ್ವರಪ್ಪ ಹೇಳಿದ್ದಾರೆ.