ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ. ಇದೇ ಬಿಜೆಪಿ, ಜೆಡಿಎಸ್ ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ. ಇಂದು ನನ್ನ ವಿರುದ್ದ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ ಸಿ ಎಸ್ ಪಿ/ಟಿಎಸ್ ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ. ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು ಎಂದು ದೂರಿದ್ದಾರೆ.