ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

Sampriya

ಬುಧವಾರ, 10 ಸೆಪ್ಟಂಬರ್ 2025 (20:15 IST)
ಬೆಂಗಳೂರು: ರಾಜ್ಯದಲ್ಲಿ ಅನರ್ಹರಿಗೆ ನೀಡಲಾಗಿದ್ದ ಬಿಪಿಎಲ್ ಪಡಿತರ ಕಾರ್ಡ್‌ಗಳ ಪೈಕಿ 3.65 ಲಕ್ಷ ಕಾರ್ಡ್‌ಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. 

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಇನ್ನೂ ಸಾಕಷ್ಟು ಮಂದಿ ಅನರ್ಹರು ಬಿಪಿಎಲ್‌ ಕಾರ್ಡ್‌ಗಳನ್ನು ಹೊಂದಿದ್ದು, ಅವುಗಳನ್ನೂ ರದ್ದುಪಡಿಸಲಾಗುವುದು. 

ಈ ಕಾರ್ಯಚರಣೆಯಲ್ಲಿ ಅರ್ಹರಿಗೆ ಯಾವುದೇ ತೊಂದರೆ ಆಗಬಾರದು. ಒಬ್ಬ ಅರ್ಹ ವ್ಯಕ್ತಿಯ ಬಿಪಿಎಲ್‌ ಕಾರ್ಡ್‌ ಸಹ ರದ್ದಾಗಬಾರದು. ಅರ್ಹರಿಗೆ ಈವರೆಗೆ ಬಿಪಿಎಲ್‌ ಕಾರ್ಡ್‌ ನೀಡಿಲ್ಲದೇ ಇದ್ದರೆ, ವಿತರಿಸಲು ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ತಾಕೀತು ಮಾಡಿದರು.

ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕು. ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರ್ಯಾಕರ್‌ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಕ್ರಮ ಕೈಗೊಳ್ಳಬೇಕು’ ಎಂದು ಸಿದ್ದರಾಮಯ್ಯ ಸೂಚಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ