ಲಿಂಗಾಯುತ ಧರ್ಮಕ್ಕೆ ಸರಕಾರ ಓ.ಕೆ....?

ಬುಧವಾರ, 26 ಜುಲೈ 2017 (17:13 IST)
ಲಿಂಗಾಯುತ ಧರ್ಮಕ್ಕೆ ಸ್ವತಂತ್ರ ಧರ್ಮ ಎಂದು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ವೀರಶೈವ ಮಹಾಸಭೆ ಸಲ್ಲಿಸಿದ ಅರ್ಜಿಯನ್ನು ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ ಎನ್ನಲಾಗುತ್ತಿದೆ.
 
ಸಿಎಂ ಸಿದ್ದರಾಮಯ್ಯ ವೀರಶೈವ ಮಹಾಸಭಾ ಸಲ್ಲಿಸಿದ ಅರ್ಜಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ರವಾನಿಸಿದ್ದಾರೆ ಎನ್ನಲಾಗುತ್ತಿದೆ. 
 
ಸಿಎಂ ಆಧೀನ ಕಾರ್ಯದರ್ಶಿಯಿಂದ ಜುಲೈ 19 ರಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅರ್ಜಿಯನ್ನು ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 
 
ಲಿಂಗಾಯುತ ಧರ್ಮಕ್ಕೆ ಮಾನ್ಯತೆ ಸಂಬಂಧ ಸಿಎಂ ಸಿದ್ದರಾಮಯ್ಯ ಸರಕಾರ ಬೆಂಬಲ ನೀಡಲು ಸಿದ್ದವಾಗಿದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
 
 ಆದರೆ, ಇದೀಗ ಸಿಎಂ ಸಿದ್ದರಾಮಯ್ಯ ವೀರಶೈವ ಮಹಾಸಭಾದಿಂದ ಯಾವುದೇ ಅರ್ಜಿ ಬಂದಿಲ್ಲ ಎಂದು ಹೇಳಿಕೆ ನೀಡಿರುವುದು ರಾಜಕೀಯ ಗೊಂದಲಕ್ಕೆ ಕಾರಣವಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ