ಹೈಕೋರ್ಟ್ ತೀರ್ಪು ಬೆನ್ನಲ್ಲೇ ಆಪರೇಷನ್ ಕಮಲದ ಬಗ್ಗೆ ಬಾಯ್ಬಿಟ್ಟ ಸಿಎಂ ಸಿದ್ಧರಾಮಯ್ಯ

Sampriya

ಮಂಗಳವಾರ, 24 ಸೆಪ್ಟಂಬರ್ 2024 (20:04 IST)
ಬೆಂಗಳೂರು:  ಬಿಜೆಪಿ ಹಾಗೂ ಜೆಡಿಎಸ್ ನವರು ಒಮ್ಮೆಯೂ ರಾಜ್ಯದಲ್ಲಿ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭೆ ಚುನಾವಣೆಯಲ್ಲಿಯೂ ಸೋತಿದ್ದಾರೆ. ಬಿಜೆಪಿ ಈ ಹಿಂದೆ ಹಣಬಲದಿಂದ, ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೇ ಹೊರತು, ಜನರ ಆಶೀರ್ವಾದದೊಂದಿಗೆ ಎಂದಿಗೂ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಡಾ ಹಗರಣ ಬಗ್ಗೆ ಹೈಕೋರ್ಟ್ ತೀರ್ಪು ವಿಚಾರವಾಗಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿದ್ದೇವೆ ಹಾಗಾಗಿ ಆಪರೇಷನ್ ಕಮಲ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ದುಡ್ಡನ್ನು ಕೊಟ್ಟು ಶಾಸಕರನ್ನು ಖರೀದಿಸುವ ಪ್ರಯತ್ನ ಮಾಡಿದ್ದರು, ಆದರೆ ನಮ್ಮ ಯಾವ ಶಾಸಕರೂ ದುಡ್ಡಿನ ಹಿಂದೆ ಹೋಗದ ಕಾರಣ ಅವರ ಪ್ರಯತ್ನ ವಿಫಲವಾಯಿತು.

ನಮ್ಮ ಸರ್ಕಾರದ ಬಡವರ ಪರ ಕಾರ್ಯಕ್ರಮಗಳನ್ನು ಬಿಜೆಪಿ ನಾಯಕರು ವಿರೋಧಿಸುತ್ತಾ ಬಂದಿದ್ದಾರೆ. ಶೂಭಾಗ್ಯ, ಪಶುಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಜನಪರ ಯೋಜನೆಗಳು ಹಾಗೂ ಈಗಿನ ಗ್ಯಾರಂಟಿ ಯೋಜನೆಗಳನ್ನು  ಸಹ ವಿರೋಧಿಸುತ್ತಿದ್ದಾರೆ. ಬಿಜೆಪಿಯವರು ಸಾಮಾಜಿಕ ನ್ಯಾಯ, ಬಡವರ ವಿರೋಧಿಗಳು. ಸರ್ಕಾರಕ್ಕೆ ಕಪ್ಪು ಮಸಿ ಬಳಿಯುವುದು ಅವರ ದುರಾಲೋಚನೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ