ಡಿಕೆ ಶಿವಕುಮಾರ್ ಕೈ ಹಿಡಿದು ಆಲಮಟ್ಟಿ ಜಲಾಶಯಕ್ಕೆ ಪೂಜೆ ಮಾಡಿದ ಸಿಎಂ ಸಿದ್ದರಾಮಯ್ಯ

Sampriya

ಬುಧವಾರ, 21 ಆಗಸ್ಟ್ 2024 (17:43 IST)
ವಿಜಯಪುರ: ನಾಡಿನ ಪ್ರತಿಷ್ಠಿತ ಆಲಮಟ್ಟಿಯ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು  ಕೃಷ್ಣಾ ನಧಿಗೆ ಗಂಗಾ ಪೂಜೆ ನೆರವೇರಿಸಿ, ಬಾಗಿನ ಅರ್ಪಣೆ ಮಾಡಿದರು.

ಆಲಮಟ್ಟಿ ಜಲಾಶಯ ಭರ್ತಿಯಾದ ಪ್ರಯುಕ್ತ ಜಲಸಂಪನ್ಮೂಲ ಇಲಾಖೆ, ಕರಷ್ಣಾ ಭಾಗ್ಯ ಜಲನಿಗಮ ನಿಯಮಿತ ಸಹೋಗದಲ್ಲಿ ಬಾಗಿನ ಅರ್ಪಣೆ ಸಮಾರಂಭ ಹಮ್ಮಿಕೊಳ್ಳಕಾಯಿತು. ಈ ಹಿನ್ನೆಲೆ ಜಲಾಶಯ ಮತ್ತು ಉದ್ಯಾನವನಕ್ಕೆ ವಿಶೇಷ ಅಲಂಕಾರ ಮಾಡಿ ಶೃಂಗಾರ ಮಾಡಲಾಗಿತ್ತು.

ಉತ್ತರ ಕರ್ನಾಟಕದ ಪ್ರತಿಷ್ಟಿತ ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣೆಯು ಪೂರ್ಣ ಮಟ್ಟಕ್ಕೆ ಆರ್. ಎಲ್. 519.60 ಮೀ. ವರೆಗೆ (123 ಟಿ.ಎಂ.ಸಿ.) ತಲುಪಿರುವುದರಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಇಂದು ಬಾಗಿನ ಅರ್ಪಿಸಿದರು.

ಈ ಜಲಾಶಯದ ಮೂಲಕ ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಡಿ ಒಟ್ಟಾರೆ 5.94 ಲಕ್ಷ ಹೆಕ್ಟೇರ್ (14.68 ಲಕ್ಷ ಎಕರೆ) ಅಚ್ಚುಕಟ್ಟು ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ