ಲಾಲ್ ಭಾಗ್ ಫ್ಲವರ್ ಶೋಗೆ ಸಿದ್ದರಾಮಯ್ಯ ಚಾಲನೆ: ಎಂಟ್ರಿ ಫೀ, ಆನ್ ಲೈನ್ ಬುಕಿಂಗ್ ಡೀಟೈಲ್ಸ್ ಇಲ್ಲಿದೆ

Krishnaveni K

ಗುರುವಾರ, 16 ಜನವರಿ 2025 (12:58 IST)
ಬೆಂಗಳೂರು: ಲಾಲ್ ಭಾಗ್ ನಲ್ಲಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ಪ್ರತಿವರ್ಷದಂತೆ ಫಲಪುಷ್ಪ ಪ್ರದರ್ಶನ ಆರಂಭವಾಗಿದೆ. ಸಿಎಂ ಸಿದ್ದರಾಮಯ್ಯ ಇಂದು ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಣರಾಜ್ಯೋತ್ಸವದ ಪ್ರಯುಕ್ತ ಮಹರ್ಷಿ ವಾಲ್ಮೀಕಿ  ವಿಷಯಾಧಾರಿತ 217ನೇ ಫಲ ಪುಷ್ಪ ಪ್ರದರ್ಶನವನ್ನು ಲಾಲ್ ಬಾಗ್ ನಲ್ಲಿ ಉದ್ಘಾಟಿಸಿದರು. ಜನವರಿ 16 ರಿಂದ ಜನವರಿ 27 ರವರೆಗೆ ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಈ ಸಂದರ್ಭದಲ್ಲಿ ವಾಲ್ಮೀಕಿ ಗುರುಪೀಠದ ಸ್ವಾಮೀಜಿಗಳು, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ವಸತಿ ಸಚಿವ ಜಮೀರ್ ಅಹಮದ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉಪಸ್ಥಿತರಿದ್ದರು.

ಎಂಟ್ರಿ ಫೀ, ಬುಕಿಂಗ್ ಹೇಗೆ?
ಲಾಲ್ ಭಾಗ್ ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಬರುವವರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಸ್ವಂತ ವಾಹನದಲ್ಲಿ ಬರುವವರಿಗೆ ವಾಹನ ನಿಲುಗಡೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಮುಂಗಡ ಟಿಕೆಟ್ ಬುಕಿಂಗ್ ಗೆ ಆನ್ ಲೈನ್ ನಲ್ಲಿ ಸೌಲಭ್ಯ ಕಲ್ಪಿಸಲಾಗಿದೆ. https://hasiru.karnataka.gov.in/flowershow/login.aspx ಎಂಬ ವೆಬ್ ಸೈಟ್ ಗೆ ಹೋಗಿ ಆನ್ ಲೈನ್ ನಲ್ಲಿ ಮುಂಗಡ ಬುಕಿಂಗ್ ಮಾಡಬಹುದು. ಸಾಮಾನ್ಯ ದಿನಗಳಲ್ಲಿ ವಯಸ್ಕರಿಗೆ 80 ರೂ., ರಜಾ ದಿನಗಳಲ್ಲಿ 100 ರೂ. ಟಿಕೆಟ್ ದರವಿದೆ. 12 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎಲ್ಲಾ ದಿನಗಳಲ್ಲಿ 30 ರೂ. ಶಾಲಾ ಸಮವಸ್ತ್ರ ಧರಿಸಿ ಬರುವ 10 ನೇ ತರಗತಿ ವರೆಗಿನ ಮಕ್ಕಳಿಗೆ ಉಚಿತ ಪ್ರವೇಶವಿರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ