ನನ್ನ ಹೆಸರನ್ನು ಕೇಳಿದರೆ ಮೋದಿಗೆ ಭಯ-ಸಿ.ಎಮ್ ಸಿದ್ದರಾಮಯ್ಯ
ಪ್ರಧಾನಿ ಮೋದಿಗೆ ನನ್ನ ಕಂಡರೆ ಭಯ. ನನ್ನ ಹೆಸರು ಕೇಳಿದರೆ ಅವರಿಗೆ ನಡುಕ ಹುಟ್ಟುತ್ತದೆ. ಹೀಗಾಗಿ ಎಲ್ಲೆಡೆ ನನ್ನ ವಿರುದ್ಧ ಮಾತನಾಡುತ್ತಾರೆ ನರೇಂದ್ರ ಮೋದಿ ಓರ್ವ ಸುಳ್ಳುಗಾರ. ಅವರು ಕರ್ನಾಟಕಕ್ಕೆ 48 ಬಾರಿ ಭೇಟಿ ನೀಡಿ ಪ್ರಚಾರ ಮಾಡಿದ್ದರು. ಆದರೆ ಅವರು ಪ್ರಚಾರ ಮಾಡಿದಲ್ಲೆಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಅಂತಾ ಮುಖ್ಯಮಂತ್ರಿ ಸಿದ್ರಾಮಯ್ಯ ತೆಲಂಗಾಣದಲ್ಲಿ ವಾಗ್ದಾಳಿ ನಡೆಸಿದ್ರು.