ಮುಡಾ ಹಗರಣ: ಪತ್ನಿ ವಿಚಾರಣೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ಜಾರಿ

Sampriya

ಸೋಮವಾರ, 4 ನವೆಂಬರ್ 2024 (18:21 IST)
ಮೈಸೂರು: ಮುಡಾ ಹಗರಣದ ಪ್ರಕರಣದ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ. ನೋಟಿಸ್‌ನಲ್ಲಿ ನವೆಂಬರ್ .6ರಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸಿದ್ದರಾಮಯ್ಯಗೆ ಸೂಚನೆ ನೀಡಲಾಗಿದೆ.

ಈಗಾಗಲೇ ಮುಡಾ ಪ್ರಕರಣ ಸಂಬಂಧ ಸಿಎಂ ಪತ್ನಿ ಪಾರ್ವತಿ ಸೇರಿದಂತೆ ಎಲ್ಲಾ ಆರೋಪಿಗಳ ವಿಚಾರಣಗೆ ಮುಗಿದಿದೆ. ಕೇವಲ ಸಿದ್ದರಾಮಯ್ಯ ವಿಚಾರಣೆಯೊಂದೇ ಬಾಕಿ ಇತ್ತು. ಇದೀಗ ಎ1 ಆರೋಪಿಗೂ ಸಹ ಲೋಕಾಯುಕ್ತ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಸಿಎಂ ಸಿದ್ದರಾಮಯ್ಯ ಅವರು ರಾಜಕೀಯ ಭವಿಷ್ಯದಲ್ಲಿ ಎದುರಿಸುತ್ತಿರುವ ಮೊದಲ ವಿಚಾರಣೆ ಇದಾಗಿದೆ. ಅವರು ಸುಮಾರ 40 ವರ್ಷಗಳಿಂದ ರಾಜಕಾರಣದಲ್ಲಿದ್ದು, ಯಾವುದೇ ರೀತಿ ಪ್ರಕರಣದಲ್ಲಿ ಆರೋಪಿಯಾಗಿ ವಿಚಾರಣೆ ಎದುರಿಸಿರಲಿಲ್ಲ. ಆದ್ರೆ, ಇದೀಗ ಸಿದ್ದರಾಮಯ್ಯನವರಿಗೆ ಮುಡಾ ಕಂಟಕ ಎದುರಾಗಿದೆ.

 ಇನ್ನು ಮುಡಾದ ಸೈಟ್​ ಬಗ್ಗೆಯೂ ಸಹ ಲೋಕಾಯುಕ್ತ ಮಹತ್ವದ ದಾಖಲೆಗಳನ್ನು ಕಲೆಹಾಕಿದೆ. ಅಲ್ಲದೇ ಸಿಎಂ ಕುಟುಂಬಕ್ಕೆ ಹಂಚಿಕೆಯಾಗಿದ್ದ ಸೈಟ್​ಗಳಿಗೂ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದರಿಂದ ತನಿಖೆಕೆಯೂ ಅಂತಿಮ ಹಂತಕ್ಕೆ ಬಂದು ತಲುಪಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ