ನಗರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ 2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ನು ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ. KMF ಮೂಲಕ ಮಕ್ಕಳಿಗೆ ಹಾಲು ಹೋಗುತ್ತದೆ.
ಈ ಹಾಲಿನ ಹಣವನ್ನು ಸರ್ಕಾರ KMF ಗೆ ನೀಡುತ್ತದೆ. ಆ ಮೂಲಕ KMF ಗೆ ಹಾಲು ಸರಬರಾಜು ಮಾಡುವ ರೈತರಿಗೆ ನೆರವಾಗುವ ತೀರ್ಮಾನ ಮಾಡಿದೆವು. ಇದರ ಜತೆಗೆ ಕಳೆದ ಬಜೆಟ್ ನಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಶುರು ಮಾಡಿದೆವು. ಈಗ ಅತ್ಯಂತ ಪೌಷ್ಠಿಕವಾದ ರಾಗಿ ಮಾಲ್ಟ್ ಕೊಡುವ ಕಾರ್ಯಕ್ರಮ ಚುರುಕುಗುತ್ತಾರೆ.ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳಿಗೆ ರಕ್ತಹೀನತೆ ಬರಲೇಬಾರದು. ಪೌಷ್ಠಿಕಾಂಶ ಕೊರತೆ ಆಗಲೇಬಾರದು. ಆಗ ಮಾತ್ರ ಮಕ್ಕಳು ಮಾನಸಿಕವಾಗಿ ಸದೃಡವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.