ದೆಹಲಿಗೆ ಸಿಎಂ ಸಿದ್ದರಾಮಯ್ಯ: ಸಚಿವ ಸ್ಥಾನದ ಆಕಾಂಕ್ಷಿಗಳೂ ದೆಹಲಿಯತ್ತ

ಮಂಗಳವಾರ, 27 ಜೂನ್ 2017 (18:35 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾತ್ರಿ 8 ಗಂಟೆಗೆ ದೆಹಲಿಗೆ ಪ್ರಯಾಣ ಬೆಳಸಲಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳೂ ದೆಹಲಿಗೆ ದೌಡಾಯಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.
 
ರಾಜ್ಯ ಸಚಿವ ಸಂಪುಟದಲ್ಲಿ ಖಾಲಿಯಿರುವ ಮೂರು ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಕೂಡಾ ಹೈಕಮಾಂಡ್‌ನ ಅಪ್ಪಣೆ ಪಡೆಯಲಿದ್ದಾರೆ ಎನ್ನಲಾಗಿದೆ. 
 
ಸಚಿವ ಸ್ಥಾನ ಭರ್ತಿ ಮಾಡುವುದನ್ನು ಅರಿತ ಕೆಲ ಶಾಸಕರು ತಮ್ಮ ತಮ್ಮ ಗಾಡ್‌ಫಾದರ್‌ಗಳ ಮೂಲಕ ಸಿಎಂ ಸಿದ್ದರಾಮಯ್ಯ ಮೇಲೆ ಒತ್ತಡ ಹೇರುವ ತಂತ್ರ ಅನುಸರಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ