ಸಿಗಂದೂರು ಸೇತುವೆ ಉದ್ಘಾಟನೆಗೆ ಕರೆದಿಲ್ಲ: ಮೋದಿಗೆ ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ

Krishnaveni K

ಮಂಗಳವಾರ, 15 ಜುಲೈ 2025 (11:36 IST)
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಿಗಂದೂರಿನಲ್ಲಿ ನಿನ್ನೆ ಲೋಕಾರ್ಪಣೆಯಾಗಿರುವ ದೇಶದ ಎರಡನೇ ಅತೀ ದೊಡ್ಡ ಕೇಬಲ್ ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ತನ್ನನ್ನು ಮುಂಚಿತವಾಗಿ ಕರೆದಿಲ್ಲ ಎಂಬುದು ಸಿಎಂ ಸಿದ್ದರಾಮಯ್ಯ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಸಾರಿಗೆ ಸಚಿವೆ ನಿತಿನ್ ಗಡ್ಕರಿ ಬಳಿಕ ಅವರೀಗ ನೇರವಾಗಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ಮೋದಿಗೆ ಪತ್ರ ಬರೆದು ಶಿಷ್ಟಾಚಾರ ಉಲ್ಲಂಘನೆಯಾಗದಂತೆ ತಕ್ಕ ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದ್ದಾರೆ. ಸಿದ್ದರಾಮಯ್ಯ ಬರೆದ ಪತ್ರದ ಸಾರಾಂಶ ಇಲ್ಲಿದೆ ನೋಡಿ.

‘ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ‌ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಅಂಬಾರಗೋಡ್ಲು - ಕಳಸವಳ್ಳಿ ಸೇತುವೆ ಉದ್ಘಾಟನೆಯೂ ಸೇರಿದಂತೆ ಹಲವು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.

ರಾಜ್ಯ ಸರ್ಕಾರವನ್ನು ಸಂಪರ್ಕಿಸದೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಮಾತ್ರವಲ್ಲ,  ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ವಿಷಯವನ್ನು ತಿಳಿಸದೆ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರನ್ನು ಕೂಡ ಮುದ್ರಿಸಲಾಗಿತ್ತು.

ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕುವುದರಿಂದ  ಹಿಡಿದು ಆಹ್ವಾನ ನೀಡುವ ವರೆಗೆ ಎಲ್ಲಾ ಹಂತಗಳಲ್ಲಿಯೂ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಂಘರ್ಷಕ್ಕೆ ಕಾರಣವಾಗಬಹುದಾದ ಈ ನಡೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು.
ಇದನ್ನು ರಾಜ್ಯ ಸರ್ಕಾರವು ಬಲವಾಗಿ ಖಂಡಿಸುತ್ತದೆ. ಮುಂದಿನ ದಿನಗಳಲ್ಲಿ ಇಂತಹ  ಲೋಪಗಳಾಗದಂತೆ ತಮ್ಮ ಎಲ್ಲಾ ಸಂಪುಟ ಸಹೋದ್ಯೋಗಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುತ್ತೀರೆಂದು ನಾನು ಭಾವಿಸಿದ್ದೇನೆ’ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ