ಉಪಚುನಾವಣೆಯಲ್ಲಿ ಒಕ್ಕಲಿಗರ ಮತಗಳನ್ನು ಸೆಳೆಯಲು ಸಿಎಂ ಮಾಸ್ಟರ್ ಪ್ಲ್ಯಾನ್

ಶುಕ್ರವಾರ, 24 ಮಾರ್ಚ್ 2017 (16:05 IST)
ಚುನಾವಣೆಗಳಲ್ಲಿ ಹಣಬಲ, ತೋಳ್ಬಲ, ಅಧಿಕಾರದ ಬಲದ ಹೊರತಾಗಿಯೂ ಜಾತಿಬಲ ಪ್ರಮುಖ ಪಾತ್ರವಹಿಸುತ್ತದೆ. ಇದನ್ನು ಅರಿತಿರುವ ಸಿಎಂ ಸಿದ್ದರಾಮಯ್ಯ, ಒಕ್ಕಲಿಗರ ಮತಗಳನ್ನು ಸೆಳೆಯಲು  ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.   
 
ಒಕ್ಕಲಿಗರ ಪ್ರಭಾವಿ ನಾಯಕ ಮಾಜಿ ಸಿಎಂ ಎಸ್.ಎಂ.ಕೃಷ್ಣ ಉಪಚುನಾವಣೆ ಪ್ರಚಾರ ಕಣಕ್ಕಿಳಿಯುವ ಹಿನ್ನೆಲೆಯಲ್ಲಿ ಒಕ್ಕಲಿಗರ ಮತಗಳನ್ನು ಸೆಳೆಯಲು ಸಿಎಂ ಸಿದ್ದರಾಮಯ್ಯ ರಣತಂತ್ರ ರೂಪಿಸಿದ್ದಾರೆ. ಶ್ರೀಗಳೊಂದಿಗೆ ಚುನಾವಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ವಿಧಾನಸಭಾ ಕ್ಷೇತ್ರದಲ್ಲಿ ಒಕ್ಕಲಿಗರ ಪ್ರಭಾವ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಒಕ್ಕಲಿಗರ ಓಲೈಕೆಗಾಗಿ ಹಿರಿಯ ಮುಖಂಡರನ್ನು ಭೇಟಿ ಮಾಡುತ್ತಿದ್ದಾರೆ ಎನ್ನಲಾಗಿದೆ.  
 
ನಂಜನಗೂಡು ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಾತ್ರ ಕಣದಲ್ಲಿರುವುದರಿಂದ ಜೆಡಿಎಸ್ ಪಕ್ಷ ಸ್ಪರ್ಧಿಸುತ್ತಿಲ್ಲ.ಒಕ್ಕಲಿಗ ಮುಖಂಡರಾದ ದೇವೇಗೌಡ ಮತ್ತು ಕುಮಾರಸ್ವಾಮಿಯವರ ಓಲೈಕೆಗೆ ಸಿಎಂ ಸಿದ್ದರಾಮಯ್ಯ ತಂತ್ರ ರೂಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ