ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಾಗಲಿರುವುದರಿಂದ ಎಚ್ಚರಿಕೆಯ ಹೆಜ್ಜೆಯಿಡುತ್ತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ, ಜನಪರ, ರೈತ ಪರವಾಗಿರೋ ಬಜೆಟ್ ಮಂಡಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎನ್ನುವುದು ರಾಜಕೀಯ ಪಂಡಿತರ ಲೆಕ್ಕಾಚಾರವಾಗಿದೆ.
ಇದೀಗ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ರೈತರ ಸಾಲ ಮನ್ನಾ ಮಾಡಿ, ಬಿಜೆಪಿಗೆ ಇನ್ನರ್ಧ ಸಾಲವನ್ನು ಮನ್ನಾ ಮಾಡಿಸಿ ನಿಮ್ಮ ಮಾತನ್ನು ಉಳಿಸಿಕೊಳ್ಳಿ ಎನ್ನುವ ಸವಾಲ್ ಹಾಕುವ ರಣತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ. ಇಲ್ಲವಾದಲ್ಲಿ ಇದೊಂದು ರೈತ ವಿರೋಧಿ ಪಕ್ಷ ಎನ್ನುವ ಪಟ್ಟ ಕಟ್ಟಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿಎಂ ಸಿದ್ದರಾಮಯ್ಯ ಮಾರ್ಚ್ 15 ರಂದು ಬಜೆಟ್ ಮಂಡಿಸಲಿದ್ದು, ಬಜೆಟ್ ಸಾಮಾನ್ಯ ಜನತೆಯ, ರೈತ ಪರ ಬಜೆಟ್ ಆಗಿರಲಿದೆಯೇ ಎನ್ನುವುದನ್ನು ಕಾದುನೋಡಬೇಕಾಗಿದೆ.