ಯೋಗಿ ಆದಿತ್ಯನಾಥ್ರಂತೆ ಸಿದ್ರಾಮಯ್ಯ ಸಾಲ ಮನ್ನಾ ಮಾಡಲಿ: ಅನಂತ್ ಕುಮಾರ್
ಭಾನುವಾರ, 4 ಜೂನ್ 2017 (13:36 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ರಂತೆ ರೈತರ ಸಾಲ ಮನ್ನಾ ಮಾಡಲಿ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಒತ್ತಾಯಿಸಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಸರಕಾರ ರಾಜ್ಯದ ಬರಗಾಲ ಪರಿಸ್ಥಿತಿ ನಿರ್ವಹಣೆಗೆ 4500 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಿದೆ. ಆದರೆ, ಮೋದಿ ಕೊಟ್ಟರೂ ಸಿಎಂ ಸಿದ್ದರಾಮಯ್ಯ ಬರಗಾಲ ಪೀಡಿತರಿಗೆ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರಕಾರ 4500 ಕೋಟಿ ರೂಪಾಯಿ ಕೊಟ್ಟರೂ ರಾಜ್ಯಸರಕಾರ 550 ಕೋಟಿ ರೂ ಕೂಡಾ ವೆಚ್ಚ ಮಾಡಿಲ್ಲ. ಬರಗಾಲ ಪೀಡಿತರಿಗೆ ಯಾವುದೇ ಆರ್ಥಿಕ ನೆರವು ನೀಡುವಲ್ಲಿ ಸರಕಾರ ವಿಫಲವಾಗಿದೆ ಎಂದು ಗುಡುಗಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.