ಕಲಬುರಗಿ : ಕಾಂಗ್ರೆಸ್ನ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಅಧಿಕೃತವಾಗಿ ಚಾಲನೆ ನೀಡಿದರು.
ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಉಚಿತ ಬೆಳಕು ಸುಸ್ಥಿರ ಬದುಕು ಅನ್ನೋ ಘೋಷವಾಕ್ಯದೊಂದಿಗೆ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್ ಸೇರಿದಂತೆ ಅನೇಕ ಸಚಿವರು, ಶಾಸಕರು ಹಾಗೂ ಸಾವಿರಾರು ಮಂದಿ ಭಾಗಿಯಾಗಿದ್ದಾರೆ.
ವೇದಿಕೆ ಮೇಲೆ 10 ಜನರಿಗೆ ಸಾಂಕೇತಿಕವಾಗಿ ಜಿರೋ ಬಿಲ್ ವಿತರಣೆ ಮಾಡುವ ಮೂಲಕ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಯಿತು.