ನಾವು ಅಧಿಕಾರಕ್ಕೆ ಬಂದರೆ ಪೆಟ್ರೋಲ್ ದರ ಏರಿಸಲ್ಲ ಎಂದಿದ್ದ ಸಿದ್ದರಾಮಯ್ಯ ಇಂದು ಮಾತು ಮರೆತರು

Krishnaveni K

ಸೋಮವಾರ, 17 ಜೂನ್ 2024 (10:20 IST)
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ನಾವು ಅಧಿಕಾರಕ್ಕೆ ಬಂದರೆ ಪೆಟ್ರೋಲ್ ದರ ಏರಿಸಲ್ಲ, ಡೀಸೆಲ್ ದರ ಏರಿಸಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಮಾತು ಮರೆತಿದ್ದಾರೆ. ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೇ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ.

ಚುನಾವಣೆ ಪ್ರಚಾರದ ವೇಳೆ ಗ್ಯಾರಂಟಿ ಯೋಜನೆಗಳ ಘೋಷಣೆಗಳ ಜೊತೆ ಸಿದ್ದರಾಮಯ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಗತ್ಯ ವಸ್ತುಗಳ ದರ ಏರಿಕೆ ಮಾಡಲ್ಲ. ಪೆಟ್ರೋಲ್ ದರ ಏರಿಸಲ್ಲ, ಡೀಸೆಲ್ ದರ ಏರಿಸಲ್ಲ ಎಂದಿದ್ದರು. ಆದರೆ ಈಗ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹೆಣಗಾಡುತ್ತಿರುವ ಸರ್ಕಾರ ಅದಕ್ಕಾಗಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದೆ.

ಇದೀಗ ಸಿದ್ದರಾಮಯ್ಯ ಚುನಾವಣೆ ಪ್ರಚಾರದ ವೇಳೆ ನಾವು ದರ ಏರಿಕೆ ಮಾಡಲ್ಲ ಎನ್ನುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನು ನೋಡಿದ ನೆಟ್ಟಿಗರು ಸಿದ್ದರಾಮಯ್ಯ ಇಷ್ಟು ಬೇಗ ಮಾತು ಮರೆತರಾ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಆರಂಭದಲ್ಲಿ ಹಾಕಿದ್ದ ಲೆಕ್ಕಾಚಾರಗಳಿಗಿಂತ ಹೆಚ್ಚು ಗ್ಯಾರಂಟಿ ಯೋಜನೆಗಳಿಗೆ ಹಣ ಬೇಕಾಗಿಬರುತ್ತಿದೆ. ಅಲ್ಲದೆ ಇತ್ತೀಚೆಗೆ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರೇ ಆಕ್ರೋಶ ವ್ಯಕ್ತಪಡಿಸಲು ಮುಂದಾಗಿದ್ದಾರೆ. ಇದೆಲ್ಲದರ ನಡುವೆ ಸರ್ಕಾರ ಈಗ ಉಚಿತ ಭಾಗ್ಯಗಗಳನ್ನು ನೀಡಲು ಜನರಿಗೇ ಬರೆ ಹಾಕಲು ಮುಂದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ