ಬಕ್ರೀದ್ ಪ್ರಾರ್ಥನೆಯಲ್ಲಿ ಮುಸ್ಲಿಂ ಟೋಪಿ ಧರಿಸಿ ಪ್ರಾರ್ಥನೆಯಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ

Krishnaveni K

ಸೋಮವಾರ, 17 ಜೂನ್ 2024 (11:16 IST)
Photo Credit: X
ಬೆಂಗಳೂರು: ಇಂದು ಮುಸ್ಲಿಂ ಬಾಂಧವರ ಪವಿತ್ರ ಬಕ್ರೀದ್ ಹಬ್ಬ. ಸಿಎಂ ಸಿದ್ದರಾಮಯ್ಯ ಮುಸ್ಲಿಂ ಟೋಪಿ ಧರಿಸಿ ಬಾಂಧವರೊಂದಿಗೆ ಬಕ್ರೀದ್ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದಾರೆ.

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಪ್ರಾರ್ಥನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮುಸ್ಲಿಂ ಟೋಪಿ ಮತ್ತು ಶಾಲು ಹಾಕಿಕೊಂಡು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದಾರೆ. ಮುಸ್ಲಿಂ ಧಾರ್ಮಿಕ ಮುಖಂಡರು ಈ ವೇಳೆ ಸಾಂಪ್ರದಾಯಿಕವಾಗಿ ತಮ್ಮ ಪ್ರಾರ್ಥನೆ ನಡೆಸಿದ್ದಾರೆ.

ಪ್ರತೀ ವರ್ಷ ಸಿಎಂ ಸಿದ್ದರಾಮಯ್ಯ ಬಕ್ರೀದ್ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುತ್ತಾರೆ. ಈ ಬಾರಿಯೂ ಮುಸ್ಲಿಂ ಬಾಂಧವರೊಂದಿಗೆ ಬೆರೆತು ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ವೇದಿಕೆಯಲ್ಲಿ ಕುಳಿತಿದ್ದ ಸಿದ್ದರಾಮಯ್ಯ ತದೇಕ ಚಿತ್ತದಿಂದ ಮುಸ್ಲಿಂ ಬಾಂಧವರ ಪ್ರಾರ್ಥನೆಯನ್ನು ಆಲಿಸಿದರು.

ಇಂದು ಬಕ್ರೀದ್ ಹಬ್ಬದ ನಿಮಿತ್ತ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದೆ. ಇದರಿಂದಾಗಿ ಇಂದು ಬೆಂಗಳೂರಿನ ಕೆಲವೆಡೆ ಇಂದು ಟ್ರಾಫಿಕ್ ಜಾಮ್ ಆಗಿದೆ. ಚಾಮರಾಜಪೇಟೆಯ ಸುತ್ತಮುತ್ತ ಟ್ರಾಫಿಕ್ ಸಮಸ್ಯೆಯಾಗದಂತೆ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ