ಬೆಳಗಾವಿ ತಲುಪಿದ ಸಿಎಂ ಸಿದ್ದರಾಮಯ್ಯ

ಶುಕ್ರವಾರ, 11 ಆಗಸ್ಟ್ 2023 (17:25 IST)
HALನಿಂದ ವಿಶೇಷ ವಿಮಾನದ ಮೂಲಕ ತೆರಳಿದ ಸಿಎಂ ಸಿದ್ದರಾಮಯ್ಯ ಬೆಳಗಾವಿಗೆ ತಲುಪಿದ್ದಾರೆ. ಬೆಳಗಾವಿಯಿಂದ ಅಥಣಿಗೆ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಿದ್ದಾರೆ. ಸಿಎಂ ಸಿದ್ದುಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಸ್ಥಳೀಯ ಶಾಸಕರು ಸಾಥ್ ನೀಡಿದ್ದಾರೆ. ಅಥಣಿಯಲ್ಲಿ ನಡೆಯುತ್ತಿರುವ ಜಗಜ್ಯೋತಿ ಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಬಳಿಕ ಅಥಣಿ ತಾಲ್ಲೂಕಿನ ವಿವಿಧ ಇಲಾಖೆಯ ಕಾಮಗಾರಿಗಳನ್ನ ಸಿಎಂ ಉದ್ಘಾಟಿಸಲಿದ್ದಾರೆ. ಅಥಣಿ ತಾಲ್ಲೂಕಿನ ಕಾರ್ಯಕ್ರಮ ಮುಗಿಸಿ ಸಂಜೆ ಬೆಂಗಳೂರಿಗೆ ಸಿಎಂ ವಾಪಸಾಗಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ