ಸಿಎಂ ಸಾಧನೆಗಳು ಜಾಹೀರಾತಿಗೆ ಮಾತ್ರ ಸೀಮಿತ: ಕುಮಾರಸ್ವಾಮಿ

ಬುಧವಾರ, 16 ಆಗಸ್ಟ್ 2017 (13:07 IST)
ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ನೀಡಿದ ಕೊಡುಗೆ ಏನು? ಅವರ ಸಾಧನೆಗಳು ಕೇವಲ ಜಾಹೀರಾತಿಗೆ ಮಾತ್ರ ಸೀಮಿತವಾಗಿವೆ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಪ್ರಚಾರ ಪಡೆಯುವುದರಲ್ಲಿ ನಿರತರಾಗಿದ್ದಾರೆ. ಯಾವುದೇ ಸಾಧನೆ ಮಾಡದಿದ್ದರೂ ಕೇವಲ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.
 
ನನ್ನ ಆರೋಗ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ನಾನು ಸಂಪೂರ್ಣವಾಗಿ ಗುಣಮುಖವಾಗಿದ್ದೇನೆ. ಗುಣಮುಖನಾಗಿದ್ದರಿಂದಲೇ ಮೈಸೂರಿಗೆ ಆಗಮಿಸಿದ್ದೇನೆ. 15 ದಿನಗಳ ಕಾಲ ಮಾತನಾಡುವುದಿಲ್ಲ. ರಾಜ್ಯದ ಬೆಳವಣಿಗೆಗಳ ಬಗ್ಗೆ ಗಮನಹರಿಸುತ್ತಿದ್ದೇನೆ. ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.    
 
ಶಾಸಕರು ಪಕ್ಷ ಬಿಟ್ಟು ಹೋಗುವ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ನಮ್ಮ ಪಕ್ಷದ ಶಾಸಕರ ಮೇಲೆ ನನಗೆ ವಿಶ್ವಾಸವಿದೆ. ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ