ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

ಶನಿವಾರ, 7 ಅಕ್ಟೋಬರ್ 2017 (16:41 IST)
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಮಂದಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಸುಳ್ಳು ಆರೋಪಗಳನ್ನು ಹೊರಿಸುವುದು ಮುಂದುವರಿಸಿದಲ್ಲಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಎಚ್ಚರಿಸಿದ್ದಾರೆ.
 
ಪುತ್ರ ಡಾ.ಯತೀಂದ್ರ ಕಂಪೆನಿಗೆ ಅಕ್ರಮವಾಗಿ ಭೂಮಿ ಮಂಜೂರು ಮಾಡಲಾಗಿದೆ ಎನ್ನುವ ಬಿಜೆಪಿ ನಾಯಕರ ಆರೋಪಗಳಲ್ಲಿ ಸತ್ಯಾಂಶವಿಲ್ಲ. ಕೇವಲ ಸುಳ್ಳು ಆರೋಪಗಳನ್ನು ಮಾಡುವುದೇ ಅವರ ಕಾಯಕವಾಗಿದೆ ಎಂದು ತಿರುಗೇಟು ನೀಡಿದ್ದಾರೆ.
 
 ಆರೋಪ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವಂತೆ ಪುತ್ರ ಡಾ.ಯತೀಂದ್ರನಿಗೆ ಸೂಚನೆ ನೀಡಿದ್ದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ