ಜ್ಯೋತಿ ಬೆಳಗುವ ವೇಳೆ ಸಿಎಂ ಸಿದ್ದರಾಮಯ್ಯ ಬಟ್ಟೆಗೆ ತಗುಲಿದ ಬೆಂಕಿಯ ಬಿಸಿ

Sampriya

ಬುಧವಾರ, 2 ಅಕ್ಟೋಬರ್ 2024 (15:28 IST)
Photo Courtesy X
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಕುರ್ಚಿ ಅಲುಗಾಡುತ್ತಿರುವ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯಗೆ ಅಮಾವಸ್ಯೆ ದಿನವೇ ಅಪಶಕುನದ ಸೂಚನೆ ನೀಡಿದೆ. ಇಂದು ಮಹಾತ್ಮ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಗಾಂಧಿ ಭವನದಿಂದ ವಿಧಾನಸೌಧದವರೆಗೆ ಕಾಂಗ್ರೆಸ್ ನಾಯಕರ ನಡಿಗೆ ಏರ್ಪಡಿಸಲಾಗಿತ್ತು. ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ , ಮಾಜಿ ಸಿಎಂ ವೀರಪ್ಪ ಮೋಯಿಲಿ, ಸಚಿವ ಹೆಚ್.ಕೆ.ಪಾಟೀಲ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಇದರ ಮಧ್ಯದಲ್ಲಿ ಕಿತ್ತೂರು ಚೆನ್ನಮ್ಮನ ಉತ್ಸವ ಹಿನ್ನೆಲೆಯಲ್ಲಿ ವಿಜಯಜ್ಯೋತಿ ಯಾತ್ರೆಗೆ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಅಲ್ಲೇ ನಿಂತಿದ್ದ ಸಿದ್ದರಾಮಯ್ಯ ಅವರು ಗ್ರೀನ್ ಫ್ಲಾಗ್ ತೆಗೆದುಕೊಳ್ಳಲು ಮುಂದಾದಗ ಬೆಂಕಿಯ ಬಿಸಿ ತಾಕಿದೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಎಚ್ಚೆತ್ತುಕೊಂಡು ಬಟ್ಟೆಯನ್ನು ದೂರ ಸರಿಸಿದರು. ಆ ಬಳಿಕ ಸಿಎಂ ಯಾತ್ರೆಗೆ ಚಾಲನೆ ನೀಡಿದ್ದು, ಈ ದೃಶಯಗಳ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿಜಯಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಅ.23, 24, 25 ರಂದು ಕಿತ್ತೂರು ಚೆನ್ನಮ್ಮನ ಉತ್ಸವ ನಡೆಯಲಿದೆ. ಅದರ ಅಂಗವಾಗಿ ವಿಜಯಜ್ಯೋತಿ ಯಾತ್ರೆ ನಡೆಯುತ್ತಿದೆ, ವಿಜಯಜ್ಯೋತಿ ಯಾತ್ರೆ ಇಂದಿನಿಂದ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕಿತ್ತೂರು ತಲುಪಲಿದೆ. 23 ರಂದು ಕಿತ್ತೂರಿನಲ್ಲಿ ವಿಜಯೋತ್ಸವ ಆಚರಿಸುತ್ತೇವೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ