ಬೆಂಗಳೂರು: ಬಹಳ ದೀರ್ಘ ಇತಿಹಾಸವಿರುವ ಕನ್ನಡದ ಬಗ್ಗೆ ನಟ ಕಮಲ್ ಹಾಸನ್ಗೆ ಏನೂ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ಥಗ್ ಲೈಫ್ ಸಿನಿಮಾ ಬಿಡುಗಡೆ ಸಮಾರಂಭದಲ್ಲಿ ಕನ್ನಡ ಬಗ್ಗೆ ನಟ ಕಮಲ್ ಹಾಸನ್ ಅವರ ಹೇಳಿಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಸಂಬಂಧ ಇಂದು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, "ಕನ್ನಡ ಭಾಷೆಗೆ ಬಹಳ ದೀರ್ಘ ಇತಿಹಾಸವಿದೆ. ಅವರಿಗೆ(ಕಮಲ್ ಹಾಸನ್) ಗೊತ್ತಿಲ್ಲ" ಎಂದು ತಿರುಗೇಟು ನೀಡಿದರು.
ನಟ ಶಿವರಾಜ್ಕುಮಾರ್ ಮುಂದೆಯೇ ನಟ ಕಮಲ್ ಹಾಸನ್ ಅವರು ಕನ್ನಡ ಹುಟ್ಟಿದ್ದೆ, ತಮಿಳಿನಿಂದ ಎನ್ನುವ ಹೇಳಿಕೆಗೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರು, ಬೆಳಗಾವಿ, ಮೈಸೂರು ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಹಲವಾರು ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ನಡೆಸುತ್ತಿವೆ.
ನಟ-ರಾಜಕಾರಣಿ ಕಮಲ್ ಹಾಸನ್ ಅವರು ರಾಜ್ಯದ ಜನರಲ್ಲಿ ಕ್ಷಮೆಯಾಚಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಅಲ್ಲದೆ ಕ್ಷಮೆಯಾಚಿಸಲು ವಿಫಲವಾದರೆ, ಅವರ 'ಥಗ್ ಲೈಫ್' ಚಿತ್ರ ಪ್ರದರ್ಶನವನ್ನು ತಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.