ಕರ್ನಾಟಕದ ಬಿಜೆಪಿಯಲ್ಲಿನ ಅಂತರ್‌ಕಲಹ ಇತ್ತೀಚಿನ ಬೆಳವಣಿಗೆಯೇನಲ್ಲ, ಇದಕ್ಕೊಂದು ಇತಿಹಾಸವಿದೆ
ಕರ್ನಾಟಕದ ಜನತೆ ಎಂದೂ ಬಿಜೆಪಿಗೆ ಪೂರ್ಣಬಹುಮತ ನೀಡಿ ಅಧಿಕಾರಕ್ಕೆ ತಂದಿಲ್ಲ. ಅಕ್ರಮ ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದರೂ ಯಾರೇ ಒಬ್ಬ ಮುಖ್ಯಮಂತ್ರಿ ಪೂರ್ಣಾವಧಿ ಆಳಿಲ್ಲ. 2008 ರಿಂದ 2013ರ ವರೆಗೆ ಮೂವರು ಮುಖ್ಯಮಂತ್ರಿಗಳು, 2019ರಿಂದ 2023ರ ಅವಧಿಯಲ್ಲಿ ಇಬ್ಬರು ಮುಖ್ಯಮಂತ್ರಿಗಳು. ಕರ್ನಾಟಕದ ಬಿಜೆಪಿಯೊಳಗಿನ ಅಂತರ್‌ಕಲಹ ನಮ್ಮಲ್ಲಿ ಮನೆಮನೆಮಾತಾಗಿದೆ. ಇದರಲ್ಲಿ ನಮ್ಮ ಪಕ್ಷದ ಯಾವುದೇ ಪಾತ್ರ ಇಲ್ಲ. ಇವೆಲ್ಲ ಸ್ವಯಂಕೃತ ಅಪರಾಧದ ಹಳವಂಡಗಳು.