ಬೆಂಗಳೂರು:ಸಂಸತ್ ನಲ್ಲಿ ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಬಗ್ಗೆ ಬಿಲ್ ಮಂಡನೆಯಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಹಾಗೂ ಎನ್ ಡಿ ಎ ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿಗಳು ಎಂಬುದನ್ನು ಅವರ ಈ ನಡೆ ನಿರೂಪಿಸುತ್ತಿದೆ. ಅವರು ಜಾತ್ಯಾತೀತ, ಸಾಮಾಜಿಕ ನ್ಯಾಯದ ಸಿದ್ದಾಂತಗಳನ್ನು ಬೆಂಬಲಿಸದ ಕೋಮುವಾದಿ ಪಕ್ಷವಾಗಿದ್ದಾರೆ ಎಂದು ತಿಳಿಸಿದರು
ಕನ್ನಡ ನಾಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ ದಿವಂಗತ ಎಸ್ ನಿಜಲಿಂಗಪ್ಪ ಅವರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ. ಅವರು ಈ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಮೌಲ್ಯಯುತ ರಾಜಕೀಯ ಜೀವನವನ್ನು ನಡೆಸಿಕೊಂಡು ಬಂದ ನಿಜಲಿಂಗಪ್ಪನವರು ನೀರಾವರಿ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ್ದಾರೆ. ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕವಾಗಿವೆ ಎಂದರು.
ಮುಖ್ಯಮಂತ್ರಿಯವರ ಹಾಗೂ ಬಿ.ಕೆ ಹರಿಪ್ರಸಾದ್ ರ ಭೇಟಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದು, ಉಭಯ ಕುಶಲೋಪರಿ ಮಾತುಕತೆ ನಡೆಸಲಾಗಿದೆ ಎಂದರು.