ಚುನಾವಣೆಗೂ ಮುನ್ನವೇ ಇಂಡಿಯಾ ಒಕ್ಕೂಟಕ್ಕೆ ಬಹುಮತ ಸಿಗಲ್ಲ ಎಂದ ಸಿಎಂ ಸಿದ್ದರಾಮಯ್ಯ

Krishnaveni K

ಶನಿವಾರ, 13 ಏಪ್ರಿಲ್ 2024 (12:08 IST)
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸೋಲಿಸುವ ಉದ್ದೇಶದಿಂದ ವಿಪಕ್ಷಗಳು ಇಂಡಿಯಾ ಒಕ್ಕೂಟ ರಚಿಸಿವೆ. ಆದರೆ ಇಂಡಿಯಾ ಒಕ್ಕೂಟಕ್ಕೆ ಚುನಾವಣೆಯಲ್ಲಿ ಬಹುತಮ ಸಿಗುವುದು ಅನುಮಾನ ಎಂದು ಸ್ವತಃ ಸಿಎಂ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ಸಂದರ್ಶನವೊಂದರಲ್ಲಿ ಸಿದ್ದರಾಮಯ್ಯ ಚುನಾವಣೆಗೆ ಮೊದಲೇ ಸೋಲೊಪ್ಪಿಕೊಂಡಿದ್ದಾರೆ. ಇಂಡಿಯಾ ಒಕ್ಕೂಟ ಸ್ಪಷ್ಟ ಬಹುಮತ ಪಡೆಯದಿರಬಹುದು. ಅದೇ ರೀತಿ ಎನ್ ಡಿಎ ಕೂಡಾ ಬಹುಮತ ಪಡೆಯಲ್ಲ. ಆದ್ದರಿಂದ ಇಂಡಿಯಾ ಒಕ್ಕೂಟ ಸಿಪಿಎಂ, ಮಮತಾ ಬ್ಯಾನರ್ಜಿ ಅವರ ಟಿಎಂಸಿ, ಒಡಿಶಾದ ನವೀನ್ ಪಾಟ್ನಾಯಕ್ ಅವರನ್ನು ಅವಲಂಬಿಸಬೇಕಾದೀತು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಕೂಡಾ ಏಕಾಂಗಿಯಾಗಿ ಬಹುಮತ ಪಡೆಯಲ್ಲ. ಆ ಪಕ್ಷವೂ ಇತರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಬೇಕಾದೀತು. ಬಿಜೆಪಿ ಶೇಕಡಾವಾರು ಮತದಾನ ಹೆಚ್ಚಿಸಿಕೊಂಡರೂ ಬಹುಮತ ಸಾಧಿಸಿದೆ ಎಂದರ್ಥವಲ್ಲ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.

ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗ ಅವರು ನೀಡಿದ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಲೋಕಸಭೆ ಚುನಾವಣೆ ಬಳಿಕ ಸಿಎಂ ಬದಲಾವಣೆಯಾಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಎಲ್ಲವೂ ಹೈಕಮಾಂಡ್ ತೀರ್ಮಾನದಂತೆ ನಡೆಯಲಿದೆ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ