ಬೆಂಗಳೂರು ಮೇ 28: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ "ಜೈ ಹಿಂದ್ ಸಭಾ" ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋದ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ ಪುರಸ್ಕರಿಸಿ ಮಾತನಾಡಿದರು.