ಆದರೆ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಗೆ ವಿಐಪಿ ಟ್ರೀಟ್ ಮೆಂಟ್ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ನಾವು ಯಾರ ಪರವೂ ಇಲ್ಲ. ಜೈಲಿನಲ್ಲಿ ರಾಜಾತಿಥ್ಯ ನೀಡಿದ ತಪ್ಪಿಗೆ 9 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇವೆ. ಯಾರನ್ನೂ ನಾವು ರಕ್ಷಿಸಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.