ರಾಜ್ಯೋತ್ಸವ ಭಾಷಣದಲ್ಲೂ ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Krishnaveni K

ಶುಕ್ರವಾರ, 1 ನವೆಂಬರ್ 2024 (12:32 IST)
ಬೆಂಗಳೂರು: ಇಂದು ಕನ್ನಡ ರಾಜ್ಯೋತ್ಸವ ನಿಮಿತ್ತ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲೂ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ.

69 ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಇಂದು ಕಂಠೀರವ ಸ್ಟೇಡಿಯಂನಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇತ್ತೀಚೆಗೆ ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು ಟೀಕೆಗೆ ಗುರಿಯಾಗಿತ್ತು.

ಇಂದು ಭಾಷಣ ಮಾಡಿದ ಅವರು ಕೇಂದ್ರ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ. 15 ನೇ ಹಣಕಾಸು ಆಯೋಗದಿಂದ ನಮ್ಮ ರಾಜ್ಯಕ್ಕೆ ಅನ್ಯಾಯವಾಯಿತು. ಕರ್ನಾಟಕಕ್ಕೆ ಸರಿಯಾಗಿ ತೆರಿಗೆ ಅನುದಾನ ಹಂಚಿಕೆಯಾಗುತ್ತಿಲ್ಲ. ಈ ಅನ್ಯಾಯದ ವಿರುದ್ಧ ಕನ್ನಡಿಗರು ಧ್ವನಿಯೆತ್ತಬೇಕು. ನಾವು ರಾಜ್ಯಕ್ಕೆ ನ್ಯಾಯಯುತ ಪಾಲು ಕೊಡಿ ಎಂದು ಕೇಳುತ್ತಿದ್ದೇವೆ. ನಮ್ಮ ಹಕ್ಕು ರಕ್ಷಣೆ ಮಾಡಿಕೊಳ್ಳುವ ಕೆಲಸವಾಗಬೇಕಿದೆ. ರಾಜ್ಯದಿಂದ ಆಯ್ಕೆಯಾದ ಸಂಸದರು ಈ ಬಗ್ಗೆ ಧ್ವನಿಯೆತ್ತಬೇಕು ಎಂದು ಸಿಎಂ ಆಗ್ರಹಿಸಿದ್ದಾರೆ.

ಇನ್ನು, ಸಾಮಾಜಿಕ ಮಾಧ್ಯಮಗಳಲ್ಲಿ ಇತ್ತೀಚೆಗೆ ಕರ್ನಾಟಕ ಮತ್ತು ಕನ್ನಡದ ಬಗ್ಗೆ ಅನ್ಯಭಾಷಿಕರಿಂದ ಅವಮಾನ ಮಾಡುವ ಚಾಳಿ ಹೆಚ್ಚಾಗುತ್ತಿದೆ. ಇದು ನಾಡದ್ರೋಹವಾಗಿದ್ದು, ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ