ಗಂಡಸರಿಗೂ ಫ್ರೀ ಬಸ್ ಕೊಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ

Krishnaveni K

ಭಾನುವಾರ, 8 ಡಿಸೆಂಬರ್ 2024 (09:41 IST)
ಬೆಂಗಳೂರು: ಮಹಿಳೆಯರಿಗೆ ನೀಡಿರುವ ಉಚಿತ ಬಸ್ ಯೋಜನೆಯನ್ನು ಗಂಡಸರಿಗೂ ವಿಸ್ತರಣೆ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಗಂಡ್ಮಕ್ಳಿಗೆ ನಿರಾಸೆ ಉಂಟು ಮಾಡಿದೆ.

ರಾಜ್ಯದಲ್ಲಿ ಮಹಿಳೆಯರಿಗೆ ನೀಡಲಾಗಿರುವ ಶಕ್ತಿ ಯೋಜನೆಯನ್ನು ಪುರುಷರಿಗೂ ವಿಸ್ತರಿಸಬೇಕು ಎಂದು ಹಲವರು ಡಿಮ್ಯಾಂಡ್ ಮಾಡುತ್ತಿದ್ದಾರೆ. ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಶಾಲಾ ಬಾಲಕನೊಬ್ಬ ನಮಗೂ ಉಚಿತ ಬಸ್ ಕೊಡಿ ಎಂದು ಕೇಳಿದ್ದ. ಇದಕ್ಕೆ ಡಿಕೆ ಶಿವಕುಮಾರ್ ಪರಿಶೀಲಿಸುವುದಾಗಿ ಹೇಳಿದ್ದರು.

ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಚಾಮರಾಜನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪುರುಷರಿಗೂ ಉಚಿತ ಬಸ್ ಯೋಜನೆ ವಿಸ್ತರಿಸುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಪುರಷರಿಗೂ ಉಚಿತ ಬಸ್ ಕೊಟ್ಟರೆ ಕೆಎಸ್ಆರ್ ಟಿಸಿಯನ್ನು ಮುಚ್ಚಬೇಕಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ಚಾಮರಾಜನಗರದಲ್ಲಿ ಆಸ್ಪತ್ರೆಯ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾಗ ಪುರುಷರಿಗೂ ಉಚಿತ ಬಸ್ ಯೋಜನೆ ವಿಸ್ತರಿಸುವಂತೆ ಅವರಿಗೆ ಮನವಿ ಮಾಡಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅವರು ಪುರುಷರಿಗೂ ಕೊಟ್ಟರೆ ಕೆಎಸ್ಆರ್ ಟಿಸಿ ಮುಚ್ಚಬೇಕಾಗುತ್ತದೆ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ