ಶಾಲೆಗಳಿಗೆ ದಸರಾ ರಜೆ ಏಕಾಏಕಿ ವಿಸ್ತರಿಸಿದ ಸಿಎಂ ಸಿದ್ದರಾಮಯ್ಯ, ಕಾರಣ ಏನ್ ಗೊತ್ತಾ

Sampriya

ಮಂಗಳವಾರ, 7 ಅಕ್ಟೋಬರ್ 2025 (17:38 IST)
ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮುಗಿಯದಿರುವ ಕಾರಣ ಹಾಗೂ ಸಮೀಕ್ಷೆಯಲ್ಲಿ ಶಿಕ್ಷಕರು ಭಾಗವಹಿಸುವ ಹಿನ್ನೆಲೆ ದಸರಾ ರಜೆಯನ್ನು ಅ.18ರ ವರೆಗೆ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 

ಈ ಹಿನ್ನೆಲೆ ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ.18ರವರೆಗೆ ರಜೆ ವಿಸ್ತರಣೆ ಮಾಡಲಾಗಿದೆ.

ಈ ಸಂಬಂದ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಉಪ‌ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಸೆಪ್ಟೆಂಬರ್‌ 22ರಿಂದ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಿಸಲಾಗಿತ್ತು. ನಿಗದಿತ ಅವಧಿಯಂತೆ ಮಂಗಳವಾರ ಕೊನೆಯ ದಿನ. ಆದರೆ, ಕೆಲವು ಜಿಲ್ಲೆಗಳಲ್ಲಿ ಸರ್ವೆ ಕಾರ್ಯ ಇನ್ನೂ ಪೂರ್ಣ ಆಗಿಲ್ಲ. ಕೊಪ್ಪಳದಲ್ಲಿ ಶೇ 97, ದಕ್ಷಿಣ ಕನ್ನಡ, ಉಡುಪಿಯಲ್ಲಿ ಶೇ 63ರಷ್ಟು ಆಗಿದೆ. ಇಡೀ ರಾಜ್ಯದಲ್ಲಿ ನಮ್ಮ ನಿರೀಕ್ಷೆಯಂತೆ ಸರ್ವೆ ಕಾರ್ಯ ಆಗಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಿ, ಮಕ್ಕಳ ಪಠ್ಯಕ್ರಮಕ್ಕೆ ತೊಂದರೆ ಆಗದಂತೆ ವಿಶೇಷ ತರಗತಿಗಳನ್ನು ನಡೆಸಲಿದ್ದಾರೆ. ಮುಂದಿನ ದಿನಗಳಲ್ಲಿ ನಡೆಸುವುದಾಗಿ ಶಿಕ್ಷಕರ ಸಂಘ ಹೇಳಿಕೊಂಡಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಇಲ್ಲದಂತೆ ನೋಡಿಕೊಳ್ಳುತ್ತಿದ್ದೇವೆ ಎಂದರು.

ಹಿಂದುಳಿದ ವರ್ಗಗಳ ಆಯೋಗದ ಮುಖ್ಯಸ್ಥ ಮಧುಸೂದನ್ ನಾಯ್ಕ್, ಜಿಬಿಎ ಅಧಿಕಾರಿಗಳು ಇದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ