ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಸ್‌.ಆರ್.ಪಾಟೀಲ್: ಸಿಎಂ ಸಿದ್ದರಾಮಯ್ಯ ಲಾಬಿ?

ಗುರುವಾರ, 20 ಏಪ್ರಿಲ್ 2017 (13:16 IST)
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಸ್‌.ಆರ್.ಪಾಟೀಲ್ ಅವರನ್ನು ನೇಮಕ ಮಾಡುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಲಾಬಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಸಿದ್ದರಾಮಯ್ಯ ಏಪ್ರಿಲ್ 23 ರಂದು ದೆಹಲಿಗೆ ತೆರಳುತ್ತಿದ್ದು ಎಸ್‌.ಆರ್.ಪಾಟೀಲ್ ಪರ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸಲಿದ್ದಾರೆ. ಎಸ್.ಆರ್.ಪಾಟೀಲ್ ಪ್ರಬಲ ಲಿಂಗಾಯುತ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಅವರ ಆಯ್ಕೆಗೆ ಹೆಚ್ಚಿನ ಒತ್ತು ನೀಡಿದ್ದಾರೆ ಎನ್ನಲಾಗುತ್ತಿದೆ.
 
ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಹೈಕಮಾಂಡ್‌ಗೆ ಬಿಟ್ಟ ವಿಚಾರ. ಹೈಕಮಾಂಡ್ ಆದೇಶ ನೀಡಿದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವ ಇರಾದೆಯನ್ನು ಜಿ.ಪರಮೇಶ್ವರ್ ಈಗಾಗಲೇ ವ್ಯಕ್ತಪಡಿಸಿದ್ದಾರೆ.
 
ಮುಂದಿನ ಚುನಾವಣೆಯಲ್ಲಿ ಒಂದು ವೇಳೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ತಮ್ಮ ಬಣದ ವ್ಯಕ್ತಿ ಕೆಪಿಸಿಸಿ ಅಧ್ಯಕ್ಷರಾಗಿದ್ದಲ್ಲಿ ಸಿಎಂ ಆಯ್ಕೆ ಸಂದರ್ಭದಲ್ಲಿ ಅನುಕೂಲವಾಗುತ್ತದೆ ಎನ್ನುವ ಲೆಕ್ಕಾಚಾರ ಸಿಎಂ ಸಿದ್ದರಾಮಯ್ಯ ಹಾಕಿರಬಹುದು ಎನ್ನುವ ವರದಿಗಳು ಹರಿದಾಡುತ್ತಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ