ಬಿಜೆಪಿಯಲ್ಲೇ ಒಬ್ಬರನ್ನು ಕಂಡ್ರೆ ಒಬ್ಬರಿಗೆ ಆಗಲ್ಲ: ಸಿಎಂ

ಬುಧವಾರ, 8 ನವೆಂಬರ್ 2017 (14:17 IST)
ಬಿಜೆಪಿಯಲ್ಲೇ ಒಬ್ಬರನ್ನು ಕಂಡ್ರೆ ಒಬ್ಬರಿಗೆ ಆಗಲ್ಲ. ಪರಸ್ಪರರು ಆರೋಪ ಪ್ರತ್ಯಾರೋಪಗಳಲ್ಲಿ ಸಮಯ ಕಳೆಯುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರಾಳ ದಿನಾಚರಣೆ ಆಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರಲ್ಲಿ ಪರಸ್ಪರರಲ್ಲಿ ದ್ವೇಷವಿದೆ. ಬಿಜೆಪಿ ಮುಖಂಡ ಸೊಗಡು ಶಿವಣ್ಣ, ಪರಿವರ್ತನಾ ಯಾತ್ರೆಗೆ ಹಣ ನೀಡಿ ಜನರನ್ನು ಕರೆತರಲಾಗುತ್ತಿದೆ ಎಂದು ಹೇಳಿದ್ದಾರೆ. ಯಾತ್ರೆಯಲ್ಲಿ ಸೀರೆ, ಹಣ ಹಂಚಿಕೆ ಮಾಡಲಾಗುತ್ತಿದೆ. ಇಂತಹ ಹೀನಾಯ ಸ್ಥಿತಿ ಬಿಜೆಪಿಗೆ ಬರಬಾರದಿತ್ತು ಎಂದು ವ್ಯಂಗ್ಯವಾಡಿದರು.  
 
ನೋಟ್ ಬ್ಯಾನ್ ನಿಷೇಧಗೊಳಿಸಿ ಒಂದು ವರ್ಷವಾದ ಹಿನ್ನೆಲೆಯಲ್ಲಿ ಕರಾಳ ದಿನಾಚರಣೆ ಆಚರಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸರ್ವಾಧಿಕಾರಿಗಳು ಎಂದು ವಾಗ್ದಾಳಿ ನಡೆಸಿದರು.
 
ದೇಶದಲ್ಲಿ ಆರ್ಥಿಕತೆ ಕುಸಿಯತೊಡಗಿದೆ. ನಿರುದ್ಯೋಗ ಸಮಸ್ಯೆ ಗಗನಕ್ಕೆ ಏರಿದೆ. ಇದಕ್ಕೆಲ್ಲಾ ಪ್ರಧಾನಿ ನೋಟ್ ಬ್ಯಾನ್ ಮಾಡಿರುವುದೇ ಮೂಲಕಾರಣವಾಗಿದೆ ಎಂದು ಕಿಡಿಕಾರಿದ್ಗಾರೆ.
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಬ್ಬರು ಜೈಲಿಗೆ ಹೋಗಿ ಬಂದವರು. ಜೈಲಿಗೆ ಹೋಗಿ ಬಂದವರು ನಮ್ಮದು ಭ್ರಷ್ಟ ಸರಕಾರವೆನ್ನುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ