ಗ್ಯಾರಂಟಿಗಳಿಂದಾಗಿ ಬೇರೆ ಅಭಿವೃದ್ಧಿಗೆ ಹಣ ಇಲ್ಲ, ಹಣ ಇಲ್ಲ ಅಂತ BJP ಅಪಪ್ರಚಾರ ಮಾಡ್ತಿದಾರಲ್ಲಾ ಹಾಗಿದ್ರೆ ಈಗ ಉದ್ಘಾಟಿಸಿದ 1695 ಕೋಟಿ ಹಣ ಎಲ್ಲಿಂದ ಬಂತು? ಒಂದೇ ವಿಶೇಷ ಕ್ಯಾಬಿನೆಟ್ ನಲ್ಲಿ 11770 ಕೋಟಿ ಕಾಮಗಾರಿಗೆ ಅನುಮೋದನೆ ಕೊಟ್ವಲ್ಲಾ, ಇದೆಲ್ಲಾ ಹೇಗಾಯ್ತು ಹೇಳ್ರಪಾ ಎಂದು ವ್ಯಂಗ್ಯವಾಗಿ BJP ಯನ್ನು ಪ್ರಶ್ನಿಸಿದರು.
ಇದೇ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ 371 ಜೆ ಜಾರಿಗೆ ಆಗ್ರಹಿಸಿ ಹೋರಾಟ ಸಂಘಟಿಸಿದ ಎಲ್ಲಾ ಜಾತಿ, ಧರ್ಮಗಳ ಹಿರಿಯ ಹೋರಾಟಗಾರರನ್ನು ಇದೇ ದಸರಾ ವೇದಿಕೆಯಲ್ಲಿ ಸನ್ಮಾನಿಸಿದ ಬಳಿಕ 371 ಜೆ ಸೃಷ್ಟಿಸಿದ ಅವಕಾಶದಲ್ಲಿ ಪ್ರಮುಖ ಹುದ್ದೆಗಳನ್ನು ಪಡೆದುಕೊಂಡ ಸಿಂಧನೂರಿನ 10 ಮಂದಿಯನ್ನು ಸನ್ಮಾನಿಸಲಾಯಿತು.
ಸಿಂಧನೂರು ಶಾಸಕರಾದ ಹಂಪನಗೌಡ ಬಾದರ್ಲಿ ಅವರು ಅಧ್ಯಕ್ಷತೆ ವಹಿಸಿದ್ದ ವೇದಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಪ್ರಕಾಶ್ ಪಾಟೀಲ್, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಬೋಸರಾಜು ಸೇರಿ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಮುಖಂಡರುಗಳು ಉಪಸ್ಥಿತರಿದ್ದರು.