ಹೈದರಾಬಾದ್​ಗೆ ಸಿಎಂ ಸಿದ್ದರಾಮಯ್ಯ

ಶನಿವಾರ, 16 ಸೆಪ್ಟಂಬರ್ 2023 (15:41 IST)
ಇಂದು ಹೈದರಾಬಾದ್​ನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಿದ್ದು, ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ತೆರಳಿದ್ದಾರೆ. ಬೆಳಗ್ಗೆ  HAL ವಿಮಾನ ನಿಲ್ದಾಣದಿಂದ ತೆರಳಿದರು. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದಾರೆ. ಇಂದು ರಾತ್ರಿ ಹೈದರಾಬಾದ್​​ನಲ್ಲೇ ಸಿಎಂ ಸಿದ್ದರಾಮಯ್ಯ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ 7 ಗಂಟೆಗೆ ಹೈದರಾಬಾದ್​​​ನ ಬೇಗಂಪೇಟ್ ವಿಮಾನ ನಿಲ್ದಾಣದ ಮೂಲಕ ಕಲಬುರಗಿಗೆ ಸಿಎಂ ಬರಲಿದ್ದಾರೆ. ಕಲಬುರಗಿಯ SVP ವೃತ್ತದಲ್ಲಿ ಬೆಳಗ್ಗೆ 8.30ಕ್ಕೆ ಸರ್ಧಾರ್ ವಲ್ಲಭ ಬಾಯ್ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಕಲಬುರಗಿಯಿಂದ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ