ಬೆಂಗಳೂರನ್ನು ಸ್ಮಾರ್ಟ್‌ತೊಟ್ಟಿಯನ್ನಾಗಿ ಮಾಡಬೇಡಿ: ಸಿಎಂ ವಾರ್ನಿಂಗ್

ಮಂಗಳವಾರ, 11 ಏಪ್ರಿಲ್ 2017 (20:03 IST)
ಉದ್ಯಾನ ನಗರಿಯಾದ ಬೆಂಗಳೂರನ್ನು ಸ್ಮಾರ್ಟ್‌ತೊಟ್ಟಿಯನ್ನಾಗಿ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
 
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮಾತನಾಡಿದ ಅವರು, ತ್ವರಿತಗತಿಯಲ್ಲಿ ಕಾಮಗಾರಿ ಅನುಷ್ಠಾನಕ್ಕೆ ಮುಂದಾಗಿ. ನಗರವನ್ನು ಸ್ವಚ್ಚವಾಗಿಡಲು ಪ್ರಯತ್ನಿಸಿ. ರಾಜ್ಯ ಸರಕಾರ 7500 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಿದೆ ಎಂದು ತಿಳಿಸಿದ್ದಾರೆ.
 
ಏಪ್ರಿಲ್ 17 ರಂದು ಕೆಂಪೇಗೌಡ ದಿನಾಚರಣೆಯನ್ನು ಮೊದಲ ಬಾರಿಗೆ ಆಚರಿಸಲು ಸರಕಾರ ನಿರ್ಧರಿಸಿದೆ. ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದರು.
 
 198 ವಾರ್ಡ್‌ಗಳಲ್ಲಿ ಇನ್ನೆರೆಡು ತಿಂಗಳಲ್ಲಿ ಇಂದಿರಾ ಕ್ಯಾಂಟಿನ್ ಆರಂಭಿಸುತ್ತೇವೆ. ನಂತರ ಸಾಧಕ ಬಾಧಕ ಗುರುತಿಸಿ ರಾಜ್ಯಾದ್ಯಂತ ಇಂದಿರಾ ಕ್ಯಾಂಟಿನ್ ಆರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ