ಬರ ನಿರ್ವಹಣೆ: ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ

ಮಂಗಳವಾರ, 18 ಏಪ್ರಿಲ್ 2017 (14:20 IST)
ಕುಡಿಯುವ ನೀರು, ಪಶುಮೇವಿಗೆ ಹೆಚ್ಚಿನ ಆದ್ಯತೆ ನೀಡಬೇಕು, ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ತೆಗೆದುಕೊಂಡು ನೀರು ಪೂರೈಸಿ. ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆಯುವಾಗ ಮಾಲೀಕರನ್ನು ಹೆದರಿಸಬೇಡಿ ಎಂದು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
 
ಬರಗಾಲ ಪರಿಸ್ಥಿತಿ ನಿರ್ವಹಣೆ ಕುರಿತಂತೆ ಜಿಲ್ಲಾಧಿಕಾರಿಗಳು, ಸಿಇಒಗಳೊಂದಿಗೆ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬರಗಾಲ ಪರಿಸ್ಥಿತಿ ನಿರ್ವಹಣೆಗೆ ಸರಕಾರ ಸಂಪೂರ್ಣ ಸಿದ್ದವಾಗಿದೆ. ಸರಕಾರ ಅಧಿಕಾರಿಗಳಿಗೆ ಎಲ್ಲಾ ರೀತಿಯ ನೆರವು ನೀಡುತ್ತದೆ ಆತಂಕ ಬೇಡ ಎಂದರು.  
 
ರಾಜ್ಯ ಸರಕಾರ ಬಿಡುಗಡೆಗೊಳಿಸಿದ ಸಬ್ಸಿಡಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆಯಾಗಬೇಕು. ಸಬ್ಸಿಡಿ ಹಣ ವಿತರಣೆಯಲ್ಲಿ ಅವ್ಯವಹಾರವಾದಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. 
 
ರಾಜ್ಯ ಸರಕಾರ ಪ್ರತಿಯೊಂದು ಜಿಲ್ಲೆಯಲ್ಲಿರುವ ಬರ ಪರಿಸ್ಥಿತಿಯ ಬಗ್ಗೆ ವರದಿ ತರಿಸಿಕೊಂಡಿದ್ದು, ಅಗತ್ಯವಾದ ಎಲ್ಲಾ ನೆರವು ನೀಡಲು ಸರಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ