ಸಂಚಾರಿ ನಿಯಮ ಪಾಲಿಸದವರ ಲೈಸೆನ್ಸ್ ರದ್ದು
ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸಾರಿಗೆ ಸಚಿವರಿಗೆ ಸೂಚನೆ ಈಡಿದರು.
ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಂ.ರೇವಣ್ಣ ಸೇರಿ ಹಲವು ಮುಖಂಡರು ಮತ್ತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.