ಸದನದಲ್ಲಿ ಜಿಎಸ್‌ಟಿ ಮಸೂದೆ ಮಂಡಿಸಿದ ಸಿಎಂ ಸಿದ್ದರಾಮಯ್ಯ

ಬುಧವಾರ, 7 ಜೂನ್ 2017 (17:13 IST)
ಸಿಎಂ ಸಿದ್ದರಾಮಯ್ಯ ಅಧಿವೇಶನದಲ್ಲಿ ಬಹು ನಿರೀಕ್ಷಿತ ಜಿಎಸ್‌ಟಿ ಮಸೂದೆಯನ್ನು ಮಂಡಿಸಿದರು.
 
ಮುಖ್ಯಮಂತ್ರಿ ಹುದ್ದೆಯೊಂದಿಗೆ ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಇಂದು ಸದನದಲ್ಲಿ ಜಿಎಸ್‌ಟಿ ಮಸೂದೆ ಪ್ರಸ್ತಾವನೆ ಸಲ್ಲಿಸಿದರು
 
ಜಿಎಸ್‌ಟಿ ಮಸೂದೆಯ ಬಗ್ಗೆ ಮಾಹಿತಿ ನೀಡುವಂತೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಸಿಎಂ ಸಿದ್ದರಾಮಯ್ಯರನ್ನು ಒತ್ತಾಯಿಸಿದರು. 
 
ಶಾಸಕರು ಜಿಎಸ್‌ಟಿ ಮಸೂದೆಯಲ್ಲಿ ಯಾವುದೇ ಬದಲಾವಣೆ ಬಯಸಿದರೂ ಸಾಧ್ಯವಿಲ್ಲ ಕೇಂದ್ರ ಸರಕಾರದಿಂದ ಈಗಾಗಲೇ ಜಾರಿಯಾಗಿದೆ ಎಂದು ಸ್ಪಷ್ಟಪಡಿಸಿದರು.
 
ಇದರಿಂದ ಆಕ್ರೋಶಗೊಂಡ ಜೆಡಿಎಸ್ ಶಾಸಕ ವೈ.ಎಸ್.ವಿ.ದತ್ತಾ ಕೇಂದ್ರ ಸರಕಾರ ರಾಜ್ಯವನ್ನು ಸಾಮಂತ ರಾಜ್ಯವನ್ನಾಗಿಸಿದೆ, ಅವರು ಚಕ್ರವರ್ತಿಗಳು, ನಾವು ಭಿಕ್ಷುಕರಾಗಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ