ದಿಡೀರ್ ಜನತಾ ದರ್ಶನ ರದ್ದುಗೊಳಿಸಿದ ಸಿಎಂ ಸಿದ್ದರಾಮಯ್ಯ

ಸೋಮವಾರ, 22 ಜನವರಿ 2018 (12:37 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ನಡೆಸಲುದ್ದೇಶಿಸಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ.
 

ಸಿಎಂ ಮನೆ ಎದುರು ಸಾರ್ವಜನಿಕರು ಅಹವಾಲುಗಳನ್ನು ನೀಡಲು ಮನೆ ಎದುರು ಸಾಲುಗಟ್ಟಿ ನಿಂತಿದ್ದರು. ಆದರೆ ಸಿಎಂ ದಿಡೀರ್ ಜನತಾ ದರ್ಶನ ರದ್ದುಗೊಳಿಸಿರುವುದರಿಂದ ಜನರು ನಿರಾಶೆಯಿಂದ ಮರಳುತ್ತಿದ್ದಾರೆ.

2018 ನೇ ಸಾಲಿನ ಬಜೆಟ್ ಪೂರ್ವಭಾವಿ ತಯಾರಿಗಾಗಿ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲು ತೀರ್ಮಾನಿಸಿರುವುದರಿಂದ ಜನತಾ ದರ್ಶನವನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ