ನಾನು ಎಲ್ಲಾ ದೇವಸ್ಥಾನಗಳಿಗೂ ನುಗ್ಗಲ್ಲ ಎಂದ ಸಿಎಂ ಸಿದ್ದರಾಮಯ್ಯ

ಗುರುವಾರ, 23 ನವೆಂಬರ್ 2017 (09:59 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ದೇವರ ಮೇಲೆ ನಂಬಿಕೆಯೇ ಇಲ್ಲ ಎಂದು ಟೀಕಿಸುತ್ತಿದ್ದವರಿಗೆ ಅವರೇ ಉತ್ತರ ನೀಡಿದ್ದಾರೆ. ನನಗೆ ದೇವರ ಮೇಲೆ ನಂಬಿಕೆಯಿದೆ. ಆದರೆ ಎಲ್ಲಾ ದೇವಸ್ಥಾನಗಳಿಗೂ ನುಗ್ಗಲ್ಲ ಎಂದಿದ್ದಾರೆ.
 

ದೇವರು ಎಂಬ ಶಕ್ತಿ ಮೇಲೆ ನನಗೆ ನಂಬಿಕೆಯಿದೆ. ಆದರೆ ದೇವಸ್ಥಾನದಲ್ಲಷ್ಟೇ ದೇವರಿದ್ದಾನೆ ಎಂಬ ನಂಬಿಕೆಯಿಲ್ಲ. ಹಾಗಾಗಿ ಎಲ್ಲಾ ದೇವಾಲಯಗಳಿಗೂ ನುಗ್ಗುವುದಿಲ್ಲ ಎಂದಿದ್ದಾರೆ.

ಇತ್ತೀಚೆಗೆ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡದಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮೇಲೆ ಟೀಕೆಗಳು ಬಂದ ಹಿನ್ನಲೆಯಲ್ಲಿ ಸಿಎಂ ಈ ಸ್ಪಷ್ಟನೆ ನೀಡಿದ್ದಾರೆ. ಈ ಬಾರಿ ನನಗೆ ಆಹ್ವಾನಿಸಿರಲಿಲ್ಲ. ಆದರೆ ಹಿಂದೆ ಆಹ್ವಾನಿಸಿದ್ದರು. ಆದರೆ ನಾನು ಹೋಗಿರಲಿಲ್ಲ ಎಂದು ಸಿಎಂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ