ಖಾಸಗಿ ವೈದ್ಯರಿಗೆ ಸಿಎಂ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಮನವಿ
ಅತ್ತ ವೈದ್ಯರ ಮುಷ್ಕರದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ, ರಾಜ್ಯಾದ್ಯಂತ ರಾಜ್ಯದ, ಹೊರ ರಾಜ್ಯದ ರೋಗಿಗಳು ಚಿಕಿತ್ಸೆ ಸಿಗದೇ ಪರದಾಡುವಂತಾಗಿದೆ. ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿರುವುದರಿಂದ ರೋಗಿಗಳಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಸಿಎಂ ವೈದ್ಯರಿಗೆ ಮನವಿ ಮಾಡಿದ್ದಾರೆ.