ಅಮಿತ್ ಶಾ, ಪ್ರಧಾನಿ ಮೋದಿಗೆ ಲೀಗಲ್ ನೋಟಿಸ್ ರವಾನಿಸಿದ ಸಿಎಂ ಸಿದ್ದರಾಮಯ್ಯ

ಮಂಗಳವಾರ, 8 ಮೇ 2018 (07:10 IST)
ಬೆಂಗಳೂರು: ತೆರಿಗೆ ವಂಚನೆ ಮಾಡಿ ಜಾರಿ ನಿರ್ದೇಶನಾಲಯದಿಂದ ಪ್ರಕರಣ ದಾಖಲಿಸಿಕೊಂಡಿರುವ ಉದ್ಯಮಿಯೊಬ್ಬರೊಂದಿಗೆ ಸಂಬಂಧವಿದೆ ಎಂದು ಆರೋಪ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ವಿಜಯ್ ಈಶ್ವರನ್ ಎಂಬ ಉದ್ಯಮಿ ಜತೆ ಸಿದ್ದರಾಮಯ್ಯ ಅಕ್ರಮವಾಗಿ ಒಪ್ಪಂದ ಮಾಡಿಕೊಂಡಿದ್ದಲ್ಲದೆ, ಅದಕ್ಕೆ ದುಬಾರಿ ವಾಚನ್ನು ಉಡುಗೊರೆಯಾಗಿ ಪಡೆದಿದ್ದರು ಎಂದು ಬಿಜೆಪಿ ಆರೋಪಿಸಿತ್ತು.

ಇದರಿಂದ ಕೆರಳಿರುವ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಲೀಗಲ್ ನೋಟಿಸ್ ನೀಡಿದ್ದಾರೆ. ಬಿಜೆಪಿ ನಾಯಕರು ವಿಜಯ್ ಮಲ್ಯ, ನೀರವ್ ಮೋದಿಯಂತಹ ಉದ್ಯಮಿಗಳಿಗೆ ಸಾವಿರಾರು ಕೋಟಿ ರೂ ತೆರಿಗೆ ವಂಚನೆ ಮಾಡಿ ತಲೆಮರೆಸಿಕೊಳ್ಳಲು ಅವಕಾಶ ನೀಡಿದ್ದಾರೆ. ಈಗ ನನ್ನ ಮೇಲೆ ಯಾವ ನೈತಿಕತೆ ಮೇಲೆ ಆರೋಪ ಮಾಡುತ್ತಾರೆ ಎಂದು ಕೆಂಡಾಮಂಡಲರಾಗಿ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ