ಕರ್ನಾಟಕಕ್ಕೆ ಯಾರೂ ಬರಬೇಡಿ ಎಂದು ನಾವು ಹೇಳಲ್ಲ: ಸಿಎಂ ಸಿದ್ದರಾಮಯ್ಯ

ಭಾನುವಾರ, 4 ಫೆಬ್ರವರಿ 2018 (13:08 IST)
ಬೆಂಗಳೂರು: ಪರಿವರ್ತನಾ ರ್ಯಾಲಿ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 

ಕರ್ನಾಟಕಕ್ಕೆ ಯಾರೂ ಬರಬೇಡಿ ಎಂದು ನಾವು ಹೇಳಲ್ಲ. ಆದರೆ ಬಿಜೆಪಿಯವರು ಬಾಯಿ ಬಿಟ್ಟರೆ ಸುಳ್ಳು ಹೇಳ್ತಾರೆ ಎಂದು ಜನಕ್ಕೂ ಗೊತ್ತಿದೆ. ತೆರಿಗೆ ವಿಚಾರದಲ್ಲೂ ಬರೀ ಸುಳ್ಳು ಹೇಳಿಕೊಂಡೇ ಬಂದಿದ್ದಾರೆ.

ಮಹದಾಯಿ ವಿವಾದ ಬಗೆ ಹರಿಸಲು ಸಾಕಷ್ಟು ಬಾರಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದೇನೆ. ಹಾಗಿದ್ದರೂ ಅವರು ಸ್ಪಂದಿಸಿಲ್ಲ. ಪ್ರಧಾನಿ ಮಧ್ಯಸ್ಥಿಕೆ ವಹಿಸಿದರೆ ಈ ಸಮಸ್ಯೆ ಬಗೆ ಹರಿಯುತ್ತದೆ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ