ಮತ್ತೆ ವೇದಿಕೆಯಲ್ಲೇ ನಿದ್ದೆಗೆ ಜಾರಿದ ಸಿದ್ದರಾಮಯ್ಯ! (ವಿಡಿಯೋ)

ಬುಧವಾರ, 10 ಜನವರಿ 2018 (10:47 IST)
ಕೊಡಗು: ಸಿಎಂ ಸಿದ್ದರಾಮಯ್ಯ ಮತ್ತೆ ವೇದಿಕೆಯಲ್ಲೇ ಗಾಢ ನಿದ್ರೆಗೆ ಜಾರಿ ಸಾಮಾಜಿಕ ಜಾಲತಾಣದಲ್ಲಿ ನಗೆಪಾಟಲಿಗೀಡಾಗಿದ್ದಾರೆ.
 

ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜತೆಗೆ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ವಿವಿಧ ನಾಯಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಸಾಧನೆಗಳನ್ನು ವೇದಿಕೆಯಲ್ಲಿ ಪುಂಖಾನುಪುಂಖವಾಗಿ ಹರಿಯಬಿಡುತ್ತಿದ್ದರೆ, ಸಿಎಂ ಸಾಹೇಬರು ವಿವಿಧ ಭಂಗಿಯಲ್ಲಿ ನಿದ್ರೆಗೆ ಜಾರಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದ್ದು, ಸಿಎಂ ನಿದ್ರೆಯ ಬಗ್ಗೆ ಟೀಕೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ