ಕೆಜೆ ಜಾರ್ಜ್ ಪರ ನಿಂತ ಸಿಎಂ: ನಿರೀಕ್ಷಣಾ ಜಾಮೀನು ಪಡೆಯಲು ಸೂಚನೆ

ಶುಕ್ರವಾರ, 27 ಅಕ್ಟೋಬರ್ 2017 (10:20 IST)
ಬೆಂಗಳೂರು: ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೆಜೆ ಜಾರ್ಜ್ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸಚಿವರ ಪರ ನಿಂತಿದ್ದಾರೆ.

 
ಬಂಧನ ಭೀತಿ ಹಿನ್ನಲೆಯಲ್ಲಿ ಸಚಿವ ಜಾರ್ಜ್ ಗೆ ನಿರೀಕ್ಷಣಾ ಜಾಮೀನು ಪಡೆಯುವಂತೆ ಸಿಎಂ ಸೂಚಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಸಚಿವರ ರಾಜೀನಾಮೆಗೆ ಒತ್ತಾಯಿಸಿದೆ.

ಆದರೆ ಜಾರ್ಜ್ ರಾಜೀನಾಮೆ ಪಡೆಯದಿರಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಈ ಬಗ್ಗೆ ಸಂಪುಟ ಸಹೋದ್ಯೋಗಿಗಳ ಜತೆ ಚರ್ಚಿಸಿದ್ದು, ಸರ್ಕಾರ ಸಚಿವರ ಬೆಂಬಲಕ್ಕೆ ನಿಲ್ಲಲು ನಿರ್ಧರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ