‘ಮೀನು ಜತೆ ಕೋಳಿ ಮಾಂಸವೂ ತಿಂದು ಧರ್ಮಸ್ಥಳಕ್ಕೆ ಹೋಗಿದ್ದೆ. ಏನಿವಾಗ?’

ಮಂಗಳವಾರ, 31 ಅಕ್ಟೋಬರ್ 2017 (09:34 IST)
ಬೆಂಗಳೂರು: ಪ್ರಧಾನಿ ಮೋದಿ ನಿರಾಹಾರದಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡಿದ ನಂತರ ಸಿಎಂ ಸಿದ್ದರಾಮಯ್ಯ ಮೀನಿನೂಟ ಮಾಡಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿತ್ತು.

 
ಇದೀಗ ತಮ್ಮ ವಿರುದ್ಧದ ಟೀಕೆಗಳಿಗೆ ಟಾಂಗ್ ಕೊಟ್ಟಿರುವ ಸಿಎಂ ಸಿದ್ದರಾಮಯ್ಯ ‘ಮೀನು ಮಾತ್ರವಲ್ಲ, ಕೋಳಿ ಮಾಂಸವನ್ನೂ ತಿಂದು ದೇವಾಲಯಕ್ಕೆ ಹೋಗಿದ್ದೆ. ಆದರೆ ಗರ್ಭಗುಡಿಗೆ ಹೋಗಿರಲಿಲ್ಲ. ದೇವರ ಬಗ್ಗೆ ಸರಿಯಾಗಿ ತಿಳಿದುಕೊಳ್ಳದಿದ್ದವರು ಏನೇನೋ ಮಾತನಾಡುತ್ತಾರೆ’ ಎಂದು ಉತ್ತರಿಸಿದ್ದಾರೆ.

ಧರ್ಮಸ್ಥಳಕ್ಕೆ ಹೋಗಿದ್ದಾಗ ಧರ್ಮಾದಿಕಾರಿಗಳು ದೇವರ ದರ್ಶನ ಮಾಡಿಕೊಂಡು ಹೋಗಿ ಎಂದಿದ್ದರು. ಆದರೆ ನಾನು ಗರ್ಭಗುಡಿಗೆ ಪ್ರವೇಶಿಸದೇ ಹೊರಗಿನಿಂದಲೇ ನಮಸ್ಕಾರ ಮಾಡಿ ಬಂದೆ. ಹಾಗಾಗಿ ದೇಗುಲ ಹೇಗೆ ಅಪವಿತ್ರವಾದೀತು? ಎಂದು ಸಿಎಂ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ